ಬೀದರ್:- ಬಿದರ್ ಜಿಲ್ಲೆಯ ಬಸವಕಲ್ಯಾಣ_ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ ಅವರು ಕೊರೊನಾ ಮಹಾಮಾರಿಗೆ ಇಂದು ಕೊನೆಯುಸಿರೆಳೆದರು.ಇವರಿಗೆ ಇತ್ತೀಚಿಗೆ ಕೋವಿಡ್ ಸೋಂಕು ದೃಡಪಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶಾಸಕರ ನಿಧನಕ್ಕೆ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಆರ್ ವಿ ದೇಶಪಾಂಡೆ ಅವರು ಸಂತಾಸ ಸೂಚಿಸಿದ್ದಾರೆ. ದೇಶಪಾಂಡೆ ಅವರು ತಮ್ಮ ಶೋಕ ಸಂದೇಶದಲ್ಲಿ ನಮ್ಮೆಲ್ಲರೊಂದಿಗೆ ಉತ್ತಮ ಭಾಂದವ್ಯವನ್ನು ಹೊಂದಿದ್ದ ಇವರು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಇಂತಹ ಸಜ್ಜನ ರಾಜಕಾರಣಿಯನ್ನು ಕಳೆದುಕೊಂಡಿದ್ದು ತೀವ್ರ ಆಘಾತವಾಗಿದೆ. ದೇವರು ಇವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಕುಟುಂಬ ವರ್ಗದವರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪರಮಾತ್ಮನಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.


Leave a Comment