ಬೆಂಗಳೂರು: ಖ್ಯಾತ ಗಾಯಕ, ಗಾನ ಗಾರುಡಿಗ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಇಂದು ನಿಧನರಾಗಿದ್ದಾರೆ.ಕರೊನಾ ಸೋಂಕಿನಿಂದ ಬಳಲುತ್ತಿದ್ದ ಎಸ್ಪಿಬಿ ಅವರನ್ನು ಆ.5ರಂದು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಿಂಗಳ ನಂತರ ಕರೊನಾ ನೆಗೆಟಿವ್ ಎಂದು ಬಂದಿತ್ತಾದರೂ ಆರೋಗ್ಯದ ಸ್ಥಿತಿಯಲ್ಲಿ ಏರುಪೇರಾಗಿದ್ದರಿಂದ ಚಿಕಿತ್ಸೆ ಮುಂದುವರಿಸಲಾಗಿತ್ತು. ಗುರುವಾರ ಸಂಜೆ ಆಸ್ಪತ್ರೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ನಲ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿತ್ತು. ಚಿಕಿತ್ಸೆ ಫಲಿಸದೆ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಕೊನೆಯುಸಿರೆಳೆದರು.ಸ್ವರ ಸಂಗೀತ ಲೋಕದ ಮೋಡಿಗಾರ ಎಂದೇ ಪ್ರಸಿದ್ಧರಾದ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು 16 ಭಾಷಗಳಲ್ಲಿ ಸುಮಾರು 40 ಸಾವಿರ ಹಾಡುಗಳನ್ನು ಹಾಡಿದ್ದರು. 6 ಬಾರಿ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದಾರೆ. ದಕ್ಷಿಣ ಭಾರತದ ಕನ್ನಡ, ತಮಿಳು ಮತ್ತು ತೆಲುಗು ಚಿತ್ರರಂಗಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ್ದ ಇವರು ಗಾಯನದಲ್ಲಷ್ಟೇ ಅಲ್ಲ, ನಟನೆ, ಸಂಗೀತ ಸಂಯೋಜನೆ, ಚಲನಚಿತ್ರ ನಿರ್ಮಾಣ, ಧ್ವನಿದಾನ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆಯಲ್ಲೂ ಸಾಧನೆ ಮಾಡಿದ್ದರು.

Leave a Comment