ಲಾರಿ ಹಾಗೂ ಕಾರ ನಡುವೆ ಭೀಕರ ಅಪಘಾತ ಸಂಭಿವಿಸಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿ ಹೆದ್ದಾರಿ 63ರಲ್ಲಿ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಬರುತ್ತಿದ್ದ ದೆಹಲಿ ನೋಂದಣಿ ಇರುವ ಕಾರು ಹಾಗೂ ಯಲ್ಲಾಪುರ ಕಡೆಯಿಂದ ಹುಬ್ಬಳ್ಳಿ ಕಡೆ ಹೋಗುತ್ತಿದ್ದ ಲಾರಿ ಮಧ್ಯೆ ಅಪಘಾತ ನಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಎಲ್ಲರೂ ಸಾವನ್ನಪ್ಪಿರುವುದರಿಂದ ಅವರ ಹೆಚ್ಚಿನ ಮಾಹಿತಿ ಸದ್ಯಕ್ಕೆ ಲಭ್ಯವಾಗತ್ತಿಲ್ಲ..ಈ ಬಗ್ಗೆ ಕಿರವತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Leave a Comment