ಹೊನ್ನಾವರ – ಪಟ್ಟಣದ ಸೇಂಟ್ ಥಾಮಸ್ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿಯಾಗಿ ಸುದೀರ್ಘ 33 ವರ್ಷಗಳ ಕಾಲ ಸೇವೆಸಲ್ಲಿಸಿ ನಿವೃತ್ತರಾಗಿದ್ದ ಆಶಾ.ವಿ.ಭಟ್ಕಳ ಇವರು ಸೆಂಪ್ಟಂಬರ್ 25 ರಂದು ನಿಧನರಾದರು.
ವಿದ್ಯಾರ್ಥಿಗಳನ್ನು ಅಥ್ಲೆಟಿಕ್ ಕ್ರೀಡೆಗಳಲ್ಲಿ ತರಬೇತುಗೊಳಿಸಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸುವಂತೆ ಮಾಡಿದ್ದರು. ನಿವೃತ್ತಿ ನಂತರವೂ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದ ಇವರ ನಿಧನಕ್ಕೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಸಂತಾಪ ಸೂಚಿಸಿದೆ.

Leave a Comment