• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಭೂಸುಧಾರಣೆ ವಿರೋಧಿಸಿ ಪ್ರತಿಭಟನೆ

September 28, 2020 by Vishwanath Shetty Leave a Comment

ಹೊನ್ನಾವರ;

ರೈತ ವಿರೋಧಿ ಕಾನೂನು ತಿದ್ದುಪಡಿ ವಿರೋಧಿಸಿ ಹೊನ್ನಾವರದಲ್ಲಿ ಸಾಂಕೇತಿಕವಾಗಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ವಿವಿಧ ಸಂಘಟನೆಯಿಂದ ಜಂಟಿಯಾಗಿ ಮನವಿ ಸಲ್ಲಿಸಲಾಯಿತು.


watermarked IMG 20200928 120858

ಎ.ಪಿ.ಎಂ.ಸಿ ತಿದ್ದುಪಡಿ ಹಾಗೂ ಭೂಸುಧಾರಣಾ ತಿದ್ದುಪಡಿ ವಿಧೇಯಕದ ವಿರುದ್ದ ರೈತ ಸಂಘಟನೆ ಹಾಗೂ ವಿವಿಧ ಸಂಘಟನೆಯ ಕರೆ ನೀಡಿದ್ದ ರಾಜ್ಯ ಬಂದ್ ಹಿನ್ನಲೆಯಲ್ಲಿ ಪಟ್ಟಣದ ಶರಾವತಿ ವೃತ್ತದ ಬಳಿ ಸಾಂಕೇತಿಕವಾಗಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ನಂತರ ಸರ್ಕಾರ ವಿರುದ್ದ ಘೊಷಣೆ ಮೊಳಗಿಸುತ್ತಾ ತಹಶೀಲ್ದಾರ ಕಛೇರಿಯವರಿಗೂ ಆಗಮಿಸಿದರು.


ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋರೊನಾದಿಂದ ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸದೇ ರೈತ ವಿರೋಧಿ ಕಾನೂನು ಜಾರಿಗೆ ತರಲು ಮುಂದಾಗುತ್ತಿದೆ. ಕಾರ್ಪೋರೇಟರ್ ಕಂಪನಿಯ ಪರವಾಗಿರುವ ಮಸೂದೆಯನ್ನು ಪ್ರತಿಪಕ್ಷ ಸೇರದಂತೆ ಯಾರ ವಿಶ್ವಾಸಕ್ಕೆ ತೆಗೆದುಕೊಳ್ಳದೇ, ಸುಗ್ರಿವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿದೆ. ಇಂತಹ ಸರ್ವಾಧಿಕಾರ ಧೋರಣೆಯಿಂದ ಸರ್ಕಾರ ಹಿಂದೆಸರಿಯಬೇಕು. ಅಲ್ಲದೇ ರೈತ ವಿರೋಧಿ ಕಾಯ್ದೆಗಳಾದ ವಿದ್ಯುತ್ ಶಕ್ತಿ ತಿದ್ದುಪಡಿ ವಿಧೇಯಕ ಕಾಯ್ದೆ 2020, ಭೂ ಸುಧಾರಣೆ ಕಾಯ್ದೆ, ಕಾರ್ಮಿಕ ವಿರೋಧಿ ನೀತಿಯನ್ನು ತಕ್ಷಣ ವಾಪಸ್ಸು ಪಡೆಯಬೇಕು. ಕಾಯ್ದೆ ಜಾರಿಗೆ ಮುಂದಾದರೆ, ದೇಶಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ತಹಶೀಲ್ದಾರ ಮೂಲಕ ಪ್ರಧಾನಮಂತ್ರಿಗಳಿಗೆ ಹಾಗೂ ಮುಖ್ಯಮಂತ್ರಿಗಳಿಗೆ ತಹಶೀಲ್ದಾರ ಮೂಲಕ ಮನವಿ ಸಲ್ಲಿಸಿದರು.
ತಹಶೀಲ್ದಾರ ವಿವೇಕ ಶೇಣ್ವಿ ಮನವಿ ಸ್ವೀಕರಿಸಿದರು.

watermarked IMG 20200928 145146


ಮಾಜಿ ಶಾಸಕ ಜೆ.ಡಿ.ನಾಯ್ಕ ಮಾತನಾಡಿ ರೈತರ ಶಾಲು ಹೊದ್ದು ಅಧಿಕಾರ ಸ್ವೀಕರಿಸಿದ ಮುಖ್ಯಮಂತ್ರಿಗಳು ರೈತರ ಪರವಾಗಿ ಯೋಜನೆ ತರುವುದನ್ನು ಬಿಟ್ಟು ಕಾರ್ಪೊರೇಟ್ ವಲಯಗಳಿಗೆ ಕೊಡುಗೆ ನೀಡಲು ಮುಂದಾಗುತ್ತಿದ್ದಾರೆ. ಈ ಕಾನೂನು ಜಾರಿಯಾದರೆ ರೈತರ ಪಾಲಿಗೆ ಮರಣ ಶಾಸನ ಬರೆದಂತಾಗುತ್ತದೆ. ಮುಂದಿನ ದಿನದಲ್ಲಿ ತುತ್ತು ಅನ್ನಕ್ಕೆ ಪರಿತಪಿಸುವ ಸ್ಥಿತಿ ಬರಲಿದೆ ಕೂಡಲೇ ಇದನ್ನು ವಾಪಸ್ಸು ಪಡೆಯುವಂತೆ ಆಗ್ರಹಿಸಿದರು.
ಕಿಸಾನ್ ಕಾಂಗ್ರೇಸ್ ಜಿಲ್ಲಾಧ್ಯಕ್ಷ ಶಿವಾನಂದ ಹೆಗಡೆ ಮಾತನಾಡಿ ರೈತರ ಪರವಾಗಿ ನಿಲ್ಲುವ ಉದ್ದೇಶದಿಂದ ಕಾಂಗ್ರೇಸ್ ಪಕ್ಷ ಸಹಕಾರ ನೀಡಲು ಇಂದಿನ ಬಂದ್ ಸಹಕಾರ ನೀಡಿದ್ದೇವೆ. ಇಂತಹ ಕರಾಳ ಕಾನೂನು ಜಾರಿಗೆ ತರಲು ರಾಜ್ಯ ಕೇಂದ್ರ ಸರ್ಕಾರಗಳು ಮುಂದಾಗಿದೆ. ಇದರಿಂದ ರೈತರು ಇನ್ನು ಹೆಚ್ಚಿನ ಸಾಲದ ಸುಳಿಗೆ ಸಿಲುಕಲಿದ್ದಾರೆ. ಮುಂದಿನ ದಿನದಲ್ಲಿ ರೈತರು ಭಿಕ್ಷೆ ಬೇಡುವವರ ಸ್ಥಿತಿ ಬರಲಿದೆ. ಇಂತಹ ಕಾನೂನು ಜಾರಿಗೆ ತರಲು ಮುಂದಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರ ತೊಲಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ರೈತ ಸಂಘದ ಅಧ್ಯಕ್ಷ ತಿಮ್ಮಪ್ಪ ಗೌಡ, ಕಾರ್ಯದರ್ಶಿ ಗಣೇಶ ಭಂಡಾರಿ, ವಿವಿಧ ಸಂಘಟನೆಯ ಪ್ರಮುಖರಾದ ಎಂ.ಎನ್. ಸುಬ್ರಹ್ಮಣ್ಯ, ಮಂಜುನಾಥ ಗೌಡ, ಜಿ.ಎನ್.ಗೌಡ, ರಾಜು ನಾಯ್ಕ ಮಂಕಿ, ಆಜಾದ್ ಅಣ್ಣಿಗೇರಿ, ಅಣ್ಣಪ್ಪ ಗೌಡ, ಶಂಕರ ಗೌಡ ಮತ್ತಿತರರು ಹಾಜರಿದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News Tagged With: Chief Ministers by Tahsildar, Kisan Congress District President, Protest against land acquisition, Shivananda Hegde, Speaking on behalf of Farmers, ಎ.ಪಿ.ಎಂ.ಸಿ ತಿದ್ದುಪಡಿ, ಕಾರ್ಪೋರೇಟರ್ ಕಂಪನಿಯ ಪರ, ಕಿಸಾನ್ ಕಾಂಗ್ರೇಸ್ ಜಿಲ್ಲಾಧ್ಯಕ್ಷ, ಭೂಸುಧಾರಣಾ ತಿದ್ದುಪಡಿ ವಿಧೇಯಕ, ಮುಖ್ಯಮಂತ್ರಿಗಳಿಗೆ ತಹಶೀಲ್ದಾರ ಮೂಲಕ ಮನವಿ, ರಾಜ್ಯ ಬಂದ್ ಹಿನ್ನಲೆ, ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ, ರೈತರ ಪರವಾಗಿ, ಶಿವಾನಂದ ಹೆಗಡೆ ಮಾತನಾಡಿ, ಸಂಘಟನೆಯಿಂದ ಜಂಟಿಯಾಗಿ ಮನವಿ

Explore More:

About Vishwanath Shetty

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,017 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...