• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅಂಜುಬುರುಕಿಯ ರಂಗವಲ್ಲಿ- ಪುಸ್ತಕ ಬಿಡುಗಡೆ

October 5, 2020 by Vishwanath Shetty Leave a Comment

ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಹೊನ್ನಾವರ ಇವರ ಸಹಯೋಗದಲ್ಲಿ ಕವಿ ಮಂಜುನಾಥ ನಾಯ್ಕ ಯಲ್ವಡಿಕವೂರ ಅವರ ಚೊಚ್ಚಲ ಕವನ ಸಂಕಲನ ‘ಅಂಜುಬುರುಕಿಯ ರಂಗವಲ್ಲಿ’ ಬಿಡುಗಡೆ ಸಮಾರಂಭ ಪಟ್ಟಣದ ಸೋಷಿಯಲ್ ಕ್ಲಬ್ ಸಭಾಂಗಣದಲ್ಲಿ ರವಿವಾರ ನಡೆಯಿತು. ಭಟ್ಕಳ ಉಪವಿಭಾಗದ ಸಹಾಯಕ ಪೋಲೀಸ್ ಅಧೀಕ್ಷಕ ನಿಖಿಲ್ ಬಿ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಭೆ ಯಾರ ಸ್ವತ್ತಲ್ಲ. ಪ್ರತಿಯೊಬ್ಬರಲ್ಲೂ ಒಂದೊಂದು ರೀತಿಯ ಪ್ರತಿಭೆ ಇರುತ್ತದೆ.

watermarked 05 HNR 01

ನಮ್ಮ ಪೋಲೀಸ್  ಇಲಾಖೆಯಲ್ಲಿಯೂ ಇಂತಹ ಕವಿ ಮನಸ್ಸಿನ ಪ್ರತಿಭೆಗಳಿರುವುದು ನಮಗೆಲ್ಲಾ ಹೆಮ್ಮೆಯ ವಿಚಾರ ಎಂದು ಕವಿ ಮಂಜುನಾಥ ನಾಯ್ಕ ಯಲ್ವಡಿಕವೂರ ಅವರಿಗೆ ಅಭಿನಂದಿಸಿದರು.
ಹಿರಿಯ ಜಾನಪದ ವಿದ್ವಾಂಸ ಡಾ.ಎನ್.ಆರ್.ನಾಯಕ ಕೃತಿ ಬಿಡುಗಡೆಗೊಳಿಸಿ ಮಾತನಾಡಿ, ಮಂಜುನಾಥ ಅವರ ಕವನ ಓದಿದ್ದು ಮನಸ್ಸಿಗೆ ಸಂತಸವಾಗಿದೆ. ಕಾವ್ಯ ಅತ್ಯಂತ ನಿಗೂಢವಾಗಿದ್ದರೂ ಓದುಗರಿಗೆ ನಿಲುಕುವಂತಿರಬೇಕು ಎಂದರು. ಕಸಾಪ ಜಿಲ್ಲಾಧ್ಯಕ್ಷ ಅರವಿಂದ ಕರ್ಕಿಕೋಡಿ ಅಧ್ಯಕ್ಷತೆ ವಹಿಸಿ ಮಾತನಾಡಿ ಇಂದು ಕವಿತೆ ರಚನೆಕಾರರು ಅವಸರದಲ್ಲಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಕವಿ ಎನ್ನುವಾತ ಓರ್ವ ತಪಸ್ವಿ ಇದ್ದಹಾಗೆ. ಅವಸರ, ಅಪೇಕ್ಷೆಗೆ ಒಳಗಾಗದೇ ತಮ್ಮನ್ನು ತಾವು ತೊಡಗಿಸಿಕೊಂಡಾಗ ಮಾತ್ರ ಉತ್ತಮ ಕವಿ ಹೊರಹೊಮ್ಮುತ್ತಾನೆ ಎಂದರು. ಸಾಹಿತಿ ಶ್ರೀಧರ ಶೇಟ್ ಶಿರಾಲಿ ಕೃತಿ ಪರಿಚಯ ಮಾಡಿದರು. ಕಸಾಪ ತಾಲೂಕಾ ಘಟಕದ ಅಧ್ಯಕ್ಷ ನಾಗರಾಜ ಹೆಗಡೆ ಅಪಗಾಲ, ರಾಮಮೂರ್ತಿ ನಾಯಕ ಅಂಕೋಲಾ, ವೃತ್ತ ನಿರೀಕ್ಷಕ ಶ್ರೀಧರ್ ಎಸ್.ಆರ್ , ಪಿಎಸ್‍ಐಗಳಾದ ಶಶಿಕುಮಾರ್ ಸಿ.ಆರ್, ಅಶೋಕ ಕುಮಾರ್, ಕ್ರೈಂ ಪಿಎಸ್‍ಐ ಸಾವಿತ್ರಿ ನಾಯಕ ಉಪಸ್ಥಿತರಿದ್ದರು. ಲೇಖಕ ಮಂಜುನಾಥ ನಾಯ್ಕ ಯಲ್ವಡಿಕವೂರ ಪುಸ್ತಕ ರಚನೆ, ಸಾಹಿತ್ಯಾಭಿರುಚಿ ಹೊಂದಲು ಪ್ರೇರಣೆಯಾದ ಸಂಗತಿಗಳನ್ನು ಹಂಚಿಕೊಂಡು ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು. ಶಂಕರ ಗೌಡ ಪ್ರಾರ್ಥಿಸಿದರು. ಪ್ರಶಾಂತ ಹೆಗಡೆ ಮೂಡಲಮನೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಭವಾನಿ ಶಂಕರ ವಂದಿಸಿದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News Tagged With: Anjuburuki Rangavalli Telephone Release Ceremony, Bhatkala, Poetry Compilation, Senior Folklore Scholar, Social Club, ಅಂಜುಬುರುಕಿಯ ರಂಗವಲ್ಲಿ’ ಬಿಡುಗಡೆ ಸಮಾರಂಭ, ಕನ್ನಡ ಸಾಹಿತ್ಯ ಪರಿಷತ್ತು ಹೊನ್ನಾವರ, ಕವನ ಸಂಕಲನ, ಕೃತಿ ಬಿಡುಗಡೆ ಉಪವಿಭಾಗ, ಭಟ್ಕಳ, ಸೋಷಿಯಲ್ ಕ್ಲಬ್, ಹಿರಿಯ ಜಾನಪದ ವಿದ್ವಾಂಸ ಡಾ.ಎನ್.ಆರ್.ನಾಯಕ

Explore More:

About Vishwanath Shetty

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...