ಹೊನ್ನಾವರ : ಈಗಾಗಲೇ ದೇಶದಲ್ಲಿ ಯುವ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಆರಂಭವಾಗಿದ್ದೂ, ಕಾಂಗ್ರೆಸ್ ಕಾರ್ಯಕರ್ತರು ಯುವಕರನ್ನು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ನೋಂದಣಿ ಮಾಡುವ ಮೂಲಕ ಕಾಂಗ್ರೆಸ್ ಶಕ್ತಿಯನ್ನು ವೃದ್ಧಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಯುವ ಶಕ್ತಿಯೇ ದೇಶದ ಶಕ್ತಿ ಎಂದು ಯುವಕರನ್ನು ಹುರಿದುಂಬಿಸುತ್ತಾ, ಇತ್ತೀಚಿಗೆ ಉತ್ತರ ಪ್ರದೇಶದ ಹತ್ರಾಸ್ ಗ್ರಾಮದಲ್ಲಿ ಹಗಲಿನಲ್ಲಿಯೇ ದಲಿತ ಯುವತಿ ಮೇಲೆ ಅತ್ಯಾಚಾರ ನಡೆಸಿ,

ಅಮಾನುಷವಾಗಿ ಹಿಂಸಿಸಿ ಕೊಲೆ ನಡೆಸಿದ್ದನ್ನು ಖಂಡಿಸಿದ ಅವರು, ದೇಶವನ್ನು ಭಯ ಮುಕ್ತಗೊಳಿಸಲು ಯುವಕರು ಮುಂದೆ ಬರುವಂತೆ ಕರೆ ನೀಡಿದರು. ಕೇಂದ್ರ ಮತ್ತು ರಾಜ್ಯದ ಬಿ.ಜೆ.ಪಿ ಸರಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡದೇ ಭೃಷ್ಟಾಚಾರದಲ್ಲಿ ನಿರತವಾಗಿದೆ ಎಂದು ಆಪಾದಿಸಿದರು. ಮುಂಬರುವ ಗ್ರಾಮ ಪಂಚಾಯತ ಚುನಾವಣೆಯನ್ನು ಪಕ್ಷದ ಕಾರ್ಯಕರ್ತರು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗುವಂತೆ ಗಮನ ಹರಿಸಬೇಕೆಂದು ಮನವಿ ಮಾಡಿದರು,
ಹೊನ್ನಾವರ ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಎಲ್ಲರನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಆರೋಗ್ಯ ಹಸ್ತ ಕಾರ್ಯಕ್ರಮ ಪ್ರತೀ ಪಂಚಾಯತ ಮಟ್ಟದಲ್ಲಿ ಅತ್ಯಂತ ತುರುಸಿನಿಂದ ನಡೆಯುತ್ತಿದ್ದು ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್. ಕೆ. ಭಾಗವತ, ಮಂಕಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಚಂದ್ರಶೇSರ ಗೌಡ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಎಂ. ಎನ್. ಸುಬ್ರಹ್ಮಣ್ಯ, ಇಂಟೆಕ್ ಅಧ್ಯಕ್ಷ ಆಗ್ನೇಲ್ ಡಯಾಸ್, ಹೊನ್ನಾವರ ಕಾಂಗೇಸ್ ಸೇವಾದಳ ಅಧ್ಯಕ್ಷ ಸಂತೋಷ ಮೇಸ್ತ, ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಝಕ್ರಿಯ್ಯಾ ಸಾಬ್, ಶಕ್ತಿ ಸಂಚಾಲಕ ಬಾಲಚಂದ್ರ ನಾಯ್ಕ, ಮಾದೇವ ನಾಯ್ಕ, ಕರ್ಕಿ, ಸಾಲ್ವೋದರ ಡಿ’ಸೋಜಾ, ಬ್ರಾಜಿಲ್ ಪಿಂಟೊ, ಚಂದ್ರಶೇಖರ ಚಾರೋಡಿ, ನೆಲ್ಸನ್ ರೊಡ್ರಿಗಿಸ್, ಜೋಸೆಪ್ ಡಿಸೋಜಾ, ಕೃಷ್ಣ ಹರಿಜನ, ಅಲ್ಲು ಪಾತ್ರೊನ ಫರ್ನಾಂಡಿಸ್, ಬಿ. ಕಾರ್ತಿಕ್, ಮದನ್ ರಾಜ್, ಲಾರ್ಸನ್ ರೊಡ್ರಿಗಿಸ್, ಅಜಮ್ ಶೇಖ, ಶಂಕರ ಮೇಸ್ತ, ಪಾಂಡುರಂಗ ನಾಯ್ಕ ಇನ್ನು ಮುಂತಾದವರು ಉಪಸ್ಥಿತರಿದ್ದರು.
Leave a Comment