ಹೊನ್ನಾವರ – ಸಮಾನ ಕೆಲಸಕ್ಕೆ ಸಮಾನ ವೇತನ ಮತ್ತು ಸೇವಾ ಭದ್ರತೆಗೆ ಆಗ್ರಹಿಸಿ ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗಳು ನಡೆಸುತ್ತಿರುವ ಮುಷ್ಕರ ಐದನೇ ದಿನಕ್ಕೆ ಕಾಲಿಟ್ಟಿದೆ.

ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯಕೀಯ, ಅರೆ ವೈದ್ಯಕೀಯ ಮತ್ತು ಕಛೇರಿಯ ಇತರೇ ಸಿಬ್ಬಂದಿಗಳು ಸಮಾನ ವೇತನ ಸೇವಾ ಭದ್ರತೆ ಹಾಗೂ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಜನಪ್ರತಿನಿಧಿಗಳಾದಿಯಾಗಿ ಯಾರೊಬ್ಬರೂ ನಮ್ಮ ಕಷ್ಟವನ್ನು ಆಲಿಸಲು ಮುಂದೆ ಬರಲಿಲ್ಲ. ರಾಜ್ಯದಲ್ಲಿರುವ 30 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳ ಬದುಕು ಡೋಲಾಯಮಾನ ಸ್ಥಿತಿಯಲ್ಲಿದೆ. ಇದನ್ನು ಸರಪಡಿಸಿ ಎಂದು ಮನವಿ ನೀಡಿದರೂ ಸ್ಪಂದಿಸಿಲ್ಲ ಕಳೆದ ಐದು ದಿನದಿಂದ ತಾಲೂಕಾಸ್ಪತ್ರೆಯ ಎದುರು ಒಂದು ತಾಸು ಸಾಂಕೇತಿಕ ದರಣಿ ನಡೆಸುತ್ತಿದ್ದೇವೆ ಬೇಡಿಕೆ ಈಡೇರುವ ವರೆಗೂ ಮುಷ್ಕರ ಹಿಂತೆಗೆದುಕೊಳ್ಳುವುದಿಲ್ಲ ಎಂದು ಪ್ರತಿಭಟನಾ ನಿರತರು ಆಕ್ರೋಶ ಹೊರ ಹಾಕಿದ್ದಾರೆ.
Leave a Comment