ವಿಧಾನಪರಿಷತ್ ಚುನಾವಣೆ ಹಿನ್ನಲೆ ನೀತಿ ಸಂಹಿತೆ ಹಾಗೂ ಮತದನ ಪ್ರಕ್ರಿಯೆ ಬಗ್ಗೆ ಸೂಕ್ತ ರೀತಿಯಲ್ಲಿ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಡಾ ಹರೀಶಕುಮಾರ್ ಕೆ. ಮಾಹಿತಿ ನೀಡಿದರು.

ಅವರು ಭಟ್ಕಳ ಮತ್ತುಇ ಹೊನ್ನಾವರ ತಾಲೂಕಿನ ಹಿರಿಯ ಅಧಿಕಾರಿಗಳ ಸಭೆಯನ್ನು ಉದ್ದೆಶಿಸಿ ಪಟ್ಟಣ ಪಂಚಾಯತ ಸಭಾಭವನದಲ್ಲಿ ಹಮ್ಮಿಕೊಂಡ ಸಭೆಯನ್ನು ಉದ್ದೆಶಿಸಿ ಮಾತನಾಡಿ ಪಶ್ಚಿಮ ಪದವೀಧರ ಕ್ಷೇತ್ರಚುನಾವಣೆ ಘೋಷಣೆಯಾಗಿದ್ದು, ಈಗಾಗಲೇ ನೀತಿ ಸಂಹಿತೆ ಜಾರಿಯಾಗಿದ್ದು ನವೆಂಬರ್ 5ರವರೆಗೆ ಜಾರಿಯಲ್ಲಿರುತ್ತದೆ. ಕೊವಿಡ್ ಹಿನ್ನಲೆಯಲ್ಲಿ ಎಲ್ಲಡೆ ಸಭೆ ಸಮಾರಂಭ ಮಾಡುವಂತಿಲ್ಲ. ಇದರಿಂದ ಅಭ್ಯರ್ಥಿಗಳು, ಜನಪ್ರತಿನಿಧಿಗಳು ವಿವಿಧಡೆ ಗುಂಫು ಗುಂಪಾಗಿ ಆಗಮಿಸಿ ಕೋವಿಡ್ ನಿಯಮ ಉಲ್ಲಂಘನೆ ಮತ್ತು ನೀತಿಸಂಹಿತೆ ನಿಯಮ ಮೀರಿ ಪ್ರಚಾರ ಕಾರ್ಯ ನಡೆಸಲು ಮುಂದಾದಲ್ಲಿ ಅವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ನಿಮ್ಮೆಲ್ಲರ ಮೇಲಿದ್ದು ತಾಲೂಕಿನಲ್ಲಿ ಅಂತಹ ಪ್ರಕರಣ ನಡೆಯದಂತೆ ನೋಡಿಕೊಳ್ಳಬೇಕಿದೆ. ಸರ್ಕಾರಿ ಅಧಿಕಾರಿಗಳು ಯಾವುದೇ ಪಕ್ಷ ಅಥವಾ ವ್ಯಕ್ತಿ ಪರವಾಗಿ ಬಹಿರಂಗವಾಗಿ ಪ್ರಚಾರ ನಡೆಸುವಂತಿಲ್ಲ. ಸಾಮಾಜಿಕ ಜಾಲತಾಣದಲ್ಲಿಯೂ ಪ್ರಚಾರ ನಡೆಸುವಂತಿಲ್ಲ. ಜನಪ್ರತಿನಿಧಿಗಳು ಭಾಗವಹಿಸುವ ಸಭೆ ಸಮಾರಂಭದಲ್ಲಿಯೂ ಭಾಗವಹಿಸುವಂತಿಲ್ಲ. ಇಂತಹ ಪ್ರಕರಣ ಬೆಳಕಿಗೆ ಬಂದಲ್ಲಿ ನಿದ್ರಾಕ್ಷೀಣ್ಯವಾಗಿ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಿದರು. ಮತದಾನಕ್ಕೆ ಅರ್ಹರಾದವರ ಪಟ್ಟಿಯನ್ನ್ನು ಸಿದ್ದವಾಗಿಟ್ಟುಕೊಳ್ಳುವ ಜವಬ್ದಾರಿ ಅಧಿಕಾರಿ ಮೇಲಿದೆ. ನೆರೆಯ ಜಿಲ್ಲೆಯಲ್ಲಿ ನಕಲಿ ವೊಟರ್ ಐಡಿ ಪತ್ತೆಯಾದ ಹಿನ್ನಲೆಯಲ್ಲಿ ಜಿಲ್ಲೆಯ ವಿವಿಧಡೆ ತಪಾಸಣೆ ನಡೆದಿದ್ದು, ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಮತಕೆಂದ್ರದಲ್ಲಿ ಕುಡಿಯುವ ನೀರು ಶೌಚಾಲಯ ಕೋವಿಡ್ ನಿಯಮ ಪಾಲನೆ ಸೇರಿದಂತೆ ಕಂದಾಯ ಮತ್ತು ಪಂಚಾಯತ ರಾಜ್ ಇಲಾಖೆಯ ಚುನಾವಣೆ ಸಿಬ್ಬಂದಿ ನಿಯೋಜನೆಯ ಕುರಿತು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣದಲ್ಲಿದ್ದು, ಇದಕ್ಕೆ ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಹಕಾರ ಬಹುಮುಖ್ಯವಾಗಿದೆ. ಮಾಸ್ಕ ಕಡ್ಡಾಯದಿಂದ ದಂಡ ವಿಧಿಸುವ ಬಗ್ಗೆ ಅಪಸ್ವರ ಕೇಳಿ ಬರುತ್ತಿದ್ದು, ಇದು ನಮ್ಮ ಖಜಾನೆ ತುಂಬಿಸಿಕೊಳ್ಳಲು ಅಲ್ಲ. ಬದಲಿಗೆ ವ್ಯಕ್ತಿ ಹಾಗೂ ಸಮಾಜದ ಹಿತದೃಷ್ಟಿಯಿಂದ ಎನ್ನುವ ಅರಿವು ಮೂಡಿಸುವ ಕಾರ್ಯ ಮಾಡಬೇಕಿದೆ. ಜನರು ನಿಯಮ ಪಾಲಿಸಲು ಆದೋಂಲನ ರೀತಿಯಲ್ಲಿ ನಾವೆಲ್ಲರೂ ಶ್ರಮಿಸಿಬೇಕಾಗಿದೆ. ಇಂದಿನಿಂದ ಹೊಸ ನಿಯಮ ಜಾರಿಯಾಗಿದ್ದು, ಆರೋಗ್ಯ ಇಲಾಖೆ ಗುರುತಿಸಿದ ಮತ್ತು ಸೊಂಕು ಪತ್ತೆಯಾದ ಪ್ರಥಮ ಹಾಗೂ ದ್ವೀತಿಯ ಸಂಪರ್ಕಕ್ಕೆ ಬಂದವರು ಕಡ್ಡಾಯ ತಪಾಸಣೆ ಮಾಡಿಕೊಳ್ಳಬೇಕಿದ್ದು, ನಿರಾಕರಿಸಿದರೆ ದಂಡದ ಜೊತೆ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿಯಾಗಿದೆ ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಕಾರ್ಯ ನಡೆಸಬೇಕಿದೆ ಎಂದರು.
ಉಪವಿಭಾಗಾಧಿಕಾರಿ ಭರತ್ ಎಸ್. ತಹಶೀಲ್ದಾರ ವಿವೇಕ ಶೇಣ್ವಿ, ಎಸ್.ರವಿಚಂದ್ರನ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
Leave a Comment