• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬಿಎಲ್‍ಎಗಳ ಜಿಲ್ಲಾ ಉಸ್ತುವಾರಿಯಾಗಿ ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ ನೇಮಕ- ಭಿಮಣ್ಣಾ ನಾಯ್ಕ.

October 9, 2020 by Yogaraj SK Leave a Comment

ಹಳಿಯಾಳ:- ಕೆಪಿಸಿಸಿಯಿಂದ ಹೊಸದಾಗಿ ಬೂತ್ ಮಟ್ಟದ ಎಜೆಂಟ್(ಬಿಎಲ್‍ಎ)ಗಳ ನೇಮಕಾತಿ ಪರಿಶೀಲನೆ ಹಿನ್ನೆಲೆ ಬಿಎಲ್‍ಎಗಳ ಜಿಲ್ಲಾ ಉಸ್ತುವಾರಿಯನ್ನಾಗಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರನ್ನು ನೇಮಿಸಿ ಪಕ್ಷದ ಹೈಕಮಾಂಡ ಆದೇಶ ಹೊರಡಿಸಿದೆ ಎಂದು ಕಾಂಗ್ರೇಸ್ ಪಕ್ಷ ಜಿಲ್ಲಾಧ್ಯಕ್ಷ ಭಿಮಣ್ಣಾ ನಾಯ್ಕ ತಿಳಿಸಿದರು.

watermarked 8 hly 3


ಪಟ್ಟಣದ ಲಕ್ಷ್ಮಣ ಪ್ಯಾಲೇಸ್‍ನಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಮಾಜಿ ಸಚಿವರು ಹಾಲಿ ಶಾಸಕರಾಗಿರುವ ಆರ್ ವಿ ದೇಶಪಾಂಡೆ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಆದಿಯಾಗಿ ಹಲವು ಹಿರಿಯ ನಾಯಕರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಕಾಂಗ್ರೇಸ್ ಭದ್ರವಿದೆ ಎಂದರು.
ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ ಅಧಿಕಾರ ವಹಿಸಿಕೊಂಡ ಬಳಿಕ ಪಕ್ಷದ ಸಂಘಟನೆಯಲ್ಲಿ ಅಮೂಲಾಗ್ರ ಬದಲಾವಣೆಗಳು ಆಗುತ್ತಿರುವ ಕಾರಣ ಶಿವಕುಮಾರ ಅವರ ಆದೇಶದಂತೆ ಜಿಲ್ಲೆಯಾದ್ಯಂತ ಕಾಂಗ್ರೇಸ್ ಪಕ್ಷ ಬಲವರ್ಧನೆಗೆ ಸಭೆಗಳನ್ನು ನಡೆಸಲಾಗುತ್ತಿದೆ ಅಲ್ಲದೇ ಗ್ರಾಮ ಪಂಚಾಯತ ಚುನಾವಣೆಗೆ ಪಕ್ಷ ಸಜ್ಜಾಗಿದೆ ಎಂದು ಹೇಳಿದ ಭಿಮಣ್ಣಾ ನಾಯ್ಕ ಯುವ ಕಾರ್ಯಕರ್ತರು ಹುಮ್ಮಸ್ಸಿನಿಂದ ದುಡಿಯಬೇಕೆಂದರು.
ಬಿಎಲ್‍ಎಗಳು ಚುನಾವಣೆಗೆ ಮಾತ್ರ ಸೀಮಿತವಾಗದೆ ಪ್ರತಿಯೊಬ್ಬರನ್ನು ಮತದಾರರ ಪಟ್ಟಿಗೆ ಸೇರಿಸುವ ಕೆಲಸ ಮಾಡಬೇಕು. ಕಾಂಗ್ರೇಸ್‍ನಿಂದ ಯುವಕರ ಸದಸ್ಯತ್ವ ಅಭಿಯಾನ ನಡೆದಿದ್ದು ಕಾಂಗ್ರೇಸ್ ಪಕ್ಷ ಯುವಕರಿಗೆ ಹೆಚ್ಚಿನ ಒತ್ತು ನೀಡುತ್ತಿದೆ. ಯುವಕರನ್ನು ಸೆಳೆಯುವ ಕೆಲಸ ಮಾಡುತ್ತಿದ್ದು ಯುವ ಸಮೂಹ ಕೇವಲ ಬಿಜೆಪಿಯಲ್ಲಿ ಮಾತ್ರವಲ್ಲ ಕಾಂಗ್ರೇಸ್‍ನಲ್ಲು ಅಪಾರ ಪ್ರಮಾಣದಲ್ಲಿದೆ ಎಂದರು.
ಎಪಿಎಮ್‍ಸಿ, ಕೃಷಿ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಸಹಿ ಸಂಗ್ರಹ ಮಾಡಲಾಗಿದೆ ಎಂದ ಅವರು ಚುನಾವಣೆಗಾಗಿ, ಅದಿಕಾರಕ್ಕಾಗಿ ಮಾತ್ರ ಪಕ್ಷಕ್ಕೆ ಸೇರದೆ ಸಮಾಜ ಮತ್ತು ದೇಶ ಸೇವೆಗಾಗಿ ಪಕ್ಷಕ್ಕೆ ಸೇರುವಂತೆ ಭೀಮಣ್ಣಾ ನಾಯ್ಕ ಕರೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಮಾತನಾಡಿ ಬಿಜೆಪಿಯ ಆಮಿಷಗಳಿಗೆ ಬಲಿಯಾಗಿದ್ದ ರೈತ ಹಾಗೂ ಯುವ ಸಮೂಹಕ್ಕೆ ಈಗ ಬಿಜೆಪಿಯ ಬಣ್ಣ ತಿಳಿಯುತ್ತಿದ್ದು, ಬಿಜೆಪಿಯ ರೈತ ವಿರೋಧಿ ಕಾಯ್ದೆಗಳಿಗೆ ದೇಶದ ರೈತ ಬೇಸತ್ತಿದ್ದಾನೆ ಹಾಗೂ ಉದ್ಯೋಗ ಸೃಷ್ಠಿ ಇಲ್ಲದೇ ಕೊಟ್ಯಂತರ ಯುವಕರು ನಿರುದ್ಯೋಗಿಗಳಾಗಿದ್ದು ಬಿಜೆಪಿಯ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಅಸಮಾಧಾನಗೊಂಡಿದ್ದು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದು ಮುಂದಿನ ದಿನಗಳಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆಂದರು.
ಕಾಂಗ್ರೇಸ್ ಪಕ್ಷ ಯುವಕರನ್ನು ಕಾಂಗ್ರೇಸ್ ಕಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಕ್ಷೇತ್ರದಲ್ಲಿ ನಡೆದಿರುವ ಯುವಕರ ನೊಂದಣಿ ಅಭಿಯಾನಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದ್ದು ತಮಗೆ ಬಿಎಲ್‍ಎ ಜಿಲ್ಲಾ ಮಟ್ಟದ ಜವಾಬ್ದಾರಿ ನೀಡಿರುವುದರಿಂದ ಶಾಸಕ ಆರ್ ವಿ ದೇಶಪಾಂಡೆ ಅವರ ನೇತೃತ್ವದಲ್ಲಿ ಹಾಗೂ ಎಲ್ಲರ ಸಹಕಾರದೊಂದಿಗೆ ಉತ್ತಮ ಕಾರ್ಯ ಮಾಡಿ ಜಿಲ್ಲೆಯಲ್ಲಿ ಪಕ್ಷ ಬಲವರ್ಧನೆಗೆ ಶ್ರಮಿಸುವುದಾಗಿ ಹೇಳಿದ ಅವರು ಮುಂದಿನ ಎಲ್ಲ ಚುನಾವಣೆಗಳಲ್ಲಿ ಕಾಂಗ್ರೇಸ್ ಪಕ್ಷ ಬಹುಮತ ಸಾಧಿಸಲಿದೆ ಎಂದರು. ಹಳೆಯ ಕಾರ್ಯಕರ್ತರು ಮತ್ತು ಯುವಕರನ್ನು ಒಗ್ಗೂಡಿಸಿ ಕೆಲಸ ಮಾಡುವ ಭರವಸೆಯನ್ನು ನೀಡಿದರು ಘೊಟ್ನೇಕರ.
ಯುವಕರಲ್ಲಿ ಜಾಗೃತಿ ಮೂಡಿಸಬೇಕಿದೆ, ಯುವಕರಲ್ಲಿ ಸಂಘಟನೆ ಅಗತ್ಯತೆ ಇದೆ ಎಂದ ಘೊಟ್ನೇಕರ ಮಾಸ್ಕ್ ಧರಿಸದಿದ್ದರೇ ಹಾಕುವ 1 ಸಾವಿರ ದಂಡದ ಬದಲು ಸರ್ಕಾರ ಎಲ್ಲ ಜನರಿಗೆ ಉಚಿತವಾಗಿ ಮಾಸ್ಕ್ ವಿತರಿಸಲಿ ದಂಡದ ಮೊತ್ತವನ್ನು 50 ರಿಂದ 100 ರೂ.ಗೆ ಇಳಿಸಲಿ ಎಂದು ಆಗ್ರಹಿಸಿದರು.
ಸುದ್ದಿಗೊಷ್ಠಿಯಲ್ಲಿ ಪ್ರಮುಖ ಮುಖಂಡರಾದ ಎಸ್.ಕೆ.ಭಾಗವತ, ರಮೇಶ ದುಬಾಶೆ, ಶ್ರೀನಿವಾಸ ಘೊಟ್ನೇಕರ, ರವಿ ತೊರಣಗಟ್ಟಿ, ಬಿಡಿ ಚೌಗಲೆ, ಶಿವಪುತ್ರಪ್ಪಾ ನುಚ್ಚಂಬ್ಲಿ, ಸಿಎಫ್ ನಾಯ್ಕ, ಸತ್ಯಜೀತ ಗಿರಿ, ಮಾಲಾ ಬ್ರಗಾಂಜಾ ಇದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Haliyal News Tagged With: ಅಭಿಯಾನಕ್ಕೆ ಉತ್ತಮ ಸ್ಪಂದನೆ, ಕಾಂಗ್ರೇಸ್ ಪಕ್ಷ ಜಿಲ್ಲಾಧ್ಯಕ್ಷ ಭಿಮಣ್ಣಾ ನಾಯ್ಕ, ಯುವಕರಿಗೆ ಹೆಚ್ಚಿನ ಒತ್ತು, ಲಕ್ಷ್ಮಣ ಪ್ಯಾಲೇಸ್‍ನಲ್ಲಿ ಸುದ್ದಿಗೊಷ್ಠಿ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,121 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...