ಹೊನ್ನಾವರ – ಕರ್ಕಿಯ ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ 38 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾಗಿ ವಿಶ್ರಾಂತ ಜೀವನ ಸಾಗಿಸುತ್ತಿದ್ದ ಮಾರುತಿ.ಡಿ.ಶೇಟ್ ಭಾನುವಾರ ನಿಧನರಾದರು.
ಅಪಾರ ಶಿಷ್ಯವೃಂದವನ್ನು ಹೊಂದಿರುವ ಇವರು ಶಾಲೆಯ ಅಭಿವೃದ್ಧಿಗೂ ಸಾಕಷ್ಟು ಶ್ರಮಿಸಿದ್ದರು. ಶಾಲೆಯ ಬಡ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಶಾಲಾ ಶುಲ್ಕ, ಸಮವಸ್ತ್ರ ನೀಡುವ ಮೂಲಕ ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾಗಿದ್ದರು ಎನ್ನುವುದನ್ನು ಶಾಲೆಯ ಮುಖ್ಯಾಧ್ಯಾಪಕರು ಶಿಕ್ಷಕರು ಸ್ಮರಿಸಿದ್ದಾರೆ.

Leave a Comment