ಹೊನ್ನಾವರ – ಪಟ್ಟಣದಲ್ಲಿರುವ ನಾಮಧಾರಿ ವಿದ್ಯಾರ್ಥಿ ನಿಲಯದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತಿಯ ಪಿಯುಸಿಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ನಾಮಧಾರಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು.

ಅರ್ಬನ್ ಬ್ಯಾಂಕ್ ನಿರ್ದೇಶಕರು ನಿವೃತ್ತ ಶಿಕ್ಷಕರೂ ಆದ ಎಸ್.ಟಿ.ನಾಯ್ಕ ಅವರು ಕಾರ್ಯಕ್ರಮ ಉದ್ಘಾಟಿಸಿದರು. ನಾಮಧಾರಿ ಸಮಾಜದ ನೌಕರರ ಸಂಘದ ಅಧ್ಯಕ್ಷರಾದ ಜಿ.ಎಚ್.ನಾಯ್ಕ, ವಿದ್ಯಾರ್ಥಿನಿಲಯದ ಕಟ್ಟಡ ಸಮಿತಿ ಅಧ್ಯಕ್ಷ ಸಿ.ಬಿ.ನಾಯ್ಕ, ಸಂಘದ ಉಪಾಧ್ಯಕ್ಷ ಟಿ.ಟಿ ನಾಯ್ಕ, ಪ್ರಧಾನ ಕಾರ್ಯದರ್ಶಿ ವಾಮನ ನಾಯ್ಕ, ಕೋಶಾಧ್ಯಕ್ಷ ಡಿ.ಎನ್.ನಾಯ್ಕ, ಸಂಘಟನಾ ಕಾರ್ಯದರ್ಶಿ ಚಂದ್ರಹಾಸ ನಾಯ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷರಾದ ಮಂಜುನಾಥ ನಾರಾಯಣ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಶೇ 98.5 ಅಂಕ ಗಳಿಸಿ ರಾಜ್ಯಕ್ಕೆ ಐದನೇ ರ್ಯಾಮಕ್ ಪಡೆದ ಶ್ರೇಯಾ ನೀಲಕಂಠ ನಾಯ್ಕ, ಪದವಿಯಲ್ಲಿ ಧಾರವಾಡ ವಿಶ್ವವಿದ್ಯಾಲಯಕ್ಕೆ 9 ನೇ ರ್ಯಾಂಕ್ ಗಳಿಸಿದ ಕಡಗೇರಿಯ ಸಂಗೀತಾ ಲಕ್ಷ್ಮಣ ನಾಯ್ಕ ಇವರನ್ನು ಸನ್ಮಾನಿಸಲಾಯಿತು. 54 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.


Leave a Comment