ಭಟ್ಕಳ: ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರವಾರ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಭಟ್ಕಳ, ವಕೀಲರ ಸಂಘ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಎರ್ಪಡಿಸಲಾಗಿದ್ದ ಕೋವಿಡ್ ಜಾಗೃತಿ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಜಗದೀಶ ಶಿವಪೂಜಿ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕಾ ಅರೋಗ್ಯಾಧಿಕಾರಿ ಡಾ. ಮೂರ್ತಿರಾಜ ಭಟ್ಟ ಅವರು ಕೋವಿಡ್-19 ಸೋಂಕು ತಡೆಗಟ್ಟಲು ನಾವು ಸಾಮಾಜಿಕ ಅಂತರವನ್ನು ಕಾಪಾಡುವುದು ಬಹು ಮುಖ್ಯವಾಗಿದೆ. ಮಾಸ್ಕ್ ಧರಿಸುವುದು, ಆಗಾಗ ಕೈಗಳನ್ನು ತೊಳೆದುಕೊಳ್ಳುವುದು ಮಾಡುವುದರಿಂದ ಸೋಂಕು ಹರಡುವುದನ್ನು ತಡೆಗಟ್ಟಬಹುದು. ಸೋಂಕು ಹರಡುವುದು ನಿಂತು ಹೋದರೆ ಮತ್ತೆ ಅದರ ಭಯ ಇರುವುದಿಲ್ಲ. ಆದರೆ ನಮಗೆ ತಿಳಿದೂ ತಿಳಿದು ನಾವು ಇಷ್ಟು ಕನಿಷ್ಟ ಅವಶ್ಯಕತೆಗಳನ್ನು ಕಾಪಾಡುವಲ್ಲಿ ನಿರ್ಲಕ್ಷ ತೋರುತ್ತಿದ್ದೇವೆ. ಇದರಿಂದಾಗಿ ಇಂದು ಎಲ್ಲೆಡೆ ಸೋಂಕು ಹರಡಿದ್ದು ಸಂಪೂರ್ಣ ನಿಯಂತ್ರಣಕ್ಕೆ ತರಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಿವಿಲ್ ನ್ಯಾಯಾಧೀಶ ಆರ್. ನಾಗೇಂದ್ರ, ವಕೀಲರ ಸಂಘದ ಅಧ್ಯಕ್ಷ ಆರ್.ಆರ್.ಶ್ರೇಷ್ಟಿ, ನಗರ ಠಾಣೆಯ ಸಬ್ ಇನ್ಸಪೆಕ್ಟರ್ಗಳಾದ ಹೆಚ್.ಬಿ.ಕುಡಗುಂಟಿ, ಭರತ್ ನಾಯಕ, ವಕೀಲರ ಸಂಘದ ಕಾರ್ಯದರ್ಶಿ ಎಂ. ಜೆ. ನಾಯ್ಕ, ವಕೀಲರುಗಳಾದ ಎಂ.ಟಿ.ನಾಯ್ಕ, ಮಹೇಶ ನಾಯ್ಕ, ಎಸ್.ಜೆ.ನಾಯ್ಕ, ಆರ್.ಜಿ. ನಾಯ್ಕ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತೆಯರು, ನ್ಯಾಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ನಂತರ ಕೋವಿಡ್-19 ಜಾಗೃತಿ ಜಾಥಾವು ರಾಷ್ಟ್ರೀಯ ಹೆದ್ದಾರಿಯಾಗಿ ಮುಖ್ಯ ರಸ್ತೆಯಲ್ಲಿ ಸಾಗಿ ಜನರಲ್ಲಿ ಕೊರೊನಾ ಜಾಗೃತಿ ಮೂಡಿಸುವಲ್ಲಿ ಕ್ರಮ ಕೈಗೊಂಡಿದ್ದು ಜನತೆಗೆ ಮೈಕ್ ಮೂಲಕ ಪ್ರಚುರ ಪಡಿಸಲಾಯಿತು. ಹಲವೆಡೆಗಳಲ್ಲಿ ಮಾಸ್ಕ್ ಧರಿಸದೇ ಇರುವವರಿಗೆ ಜಾಗೃತಿ ಹೇಳಿ ಮಾಸ್ಕ್ ವಿತರಿಸಲಾಯಿತು.
Leave a Comment