• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅಂತಾರಾಷ್ಟ್ರೀಯ ಪ್ರಯಾಣಿಕರ ವೀಸಾ ಮತ್ತು ಪ್ರಯಾಣ ನಿರ್ಬಂಧಗಳ ಸಡಿಲಿಕೆ

October 22, 2020 by Sachin Hegde Leave a Comment

ಕೋವಿಡ್-19 ಸಾಂಕ್ರಾಮಿಕದಿಂದ ಉಂಟಾಗಿರುವ ಪರಿಸ್ಥಿತಿ ಹಿನ್ನೆಲೆಯಲ್ಲಿ ಭಾರತ ಸರ್ಕಾರ 2020ರ ಫೆಬ್ರವರಿಯಿಂದೀಚೆಗೆ ಅಂತಾರಾಷ್ಟ್ರೀಯ ಪ್ರಯಾಣಿಕರ ಆಗಮನ ಮತ್ತು ನಿರ್ಗಮನ ಸಂಚಾರ ನಿರ್ಬಂಧಿಸಲು ಹಂತಹಂತವಾಗಿ ಕ್ರಮಗಳನ್ನು ಕೈಗೊಂಡಿತ್ತು.

visa


ಇದೀಗ ಸರ್ಕಾರ ವೀಸಾ ಮತ್ತು ಪ್ರಯಾಣ ನಿರ್ಬಂಧಗಳನ್ನು ಹಂತಹಂತವಾಗಿ ಸಡಿಲಿಸಲು ನಿರ್ಧರಿಸಿದ್ದು, ಆ ಮೂಲಕ ದೇಶಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ಭಾರತೀಯರು ಮತ್ತು ವಿದೇಶಿ ಪ್ರಜೆಗಳಿಗೆ ಅವಕಾಶ ಮಾಡಿಕೊಡಲಾಗುವುದು. ಆದ್ದರಿಂದ ಭಾರತಕ್ಕೆ ಯಾವುದೇ ಉದ್ದೇಶಕ್ಕೆ ಆಗಮಿಸಲು ಬಯಸುವ ಎಲ್ಲ ವಿದೇಶಿ ಪ್ರಜೆಗಳಿಗೆ ಮತ್ತು ಒಸಿಐ ಮತ್ತು ಪಿಐಒ ಕಾರ್ಡ್ ಹೊಂದಿರುವವರಿಗೆ ಅನುಮತಿ ನೀಡಲು ತೀರ್ಮಾನಿಸಲಾಗಿದೆ. ಅಧಿಕೃತ ವಿಮಾನ ನಿಲ್ದಾಣಗಳು ಮತ್ತು ಬಂದರುಗಳ ತಪಾಸಣಾ ಕೇಂದ್ರಗಳ ಮೂಲಕ ವಾಯು ಅಥವಾ ಜಲಮಾರ್ಗದ ಮೂಲಕ ಪ್ರವೇಶಿಸಲು ಅವಕಾಶವಿದೆ. ಆದರೆ ಪ್ರವಾಸಿ ವೀಸಾ ಹೊಂದಿರುವವರಿಗೆ ಈ ಅವಕಾಶ ಇರುವುದಿಲ್ಲ. ಈ ನಿರ್ಧಾರದಡಿ, ವಂದೇ ಭಾರತ್ ಮಿಷನ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಮಾನಗಳು, ವಾಯುಸಾರಿಗೆ ಬಬಲ್ ವ್ಯಸ್ಥೆಗಳು ಅಥವಾ ನಾಗರಿಕ ವಿಮಾನಯಾನ ಸಚಿವಾಲಯ ಅವಕಾಶ ನೀಡಿರುವ ಯಾವುದೇ ನಿಗದಿಯಾಗದ ವಾಣಿಜ್ಯ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಅಂತಹ ಎಲ್ಲ ಪ್ರಯಾಣಿಕರು ಕ್ವಾರಂಟೈನ್ ಮತ್ತು ಇತರ ಆರೋಗ್ಯ/ಕೋವಿಡ್-19 ವಿಚಾರಗಳಿಗೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
ಭಾರತ ಸರ್ಕಾರ ಹಂತ ಹಂತವಾಗಿ ನಿಯಮಗಳನ್ನು ಸಡಿಲಿಸಲು ನಿರ್ಧರಿಸಿರುವ ಜೊತೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಹಾಲಿ ಇರುವ ವೀಸಾಗಳು(ಎಲೆಕ್ಟ್ರಾನಿಕ್ ವೀಸಾ, ಪ್ರವಾಸಿ ವೀಸಾ ಮತ್ತು ವೈದ್ಯಕೀಯ ವೀಸಾ ಹೊರತುಪಡಿಸಿ) ಪುನರ್ ಜಾರಿಗೆ ಬರಲಿದೆ. ಒಂದು ವೇಳೆ ಅಂತಹ ವೀಸಾಗಳ ಅವಧಿ ಮುಗಿದಿದ್ದರೆ ಸಂಬಂಧಿಸಿದ ಭಾರತೀಯ ರಾಯಭಾರ ಕಚೇರಿಗಳಿಂದ ಸೂಕ್ತ ವರ್ಗದಡಿ ಹೊಸ ವೀಸಾಗಳನ್ನು ಪಡೆಯಬಹುದಾಗಿದೆ. ಯಾವುದೇ ವಿದೇಶಿಯರು ವೈದ್ಯಕೀಯ ಚಿಕಿತ್ಸೆಗಾಗಿ ಭಾರತಕ್ಕೆ ಭೇಟಿ ನೀಡಲು ಬಯಸಿದರೆ ಅವರು ತಮ್ಮ ಪರಿಚಾರಕರು ಸೇರಿದಂತೆ
ಪ್ರತ್ಯೇಕ ವೈದ್ಯಕೀಯ ವೀಸಾಗಾಗಿ ಅರ್ಜಿ ಸಲ್ಲಿಸಬಹುದು. ಈ ನಿರ್ಧಾರದಿಂದಾಗಿ ವಿದೇಶಿ ಪ್ರಜೆಗಳು ವಾಣಿಜ್ಯ, ಸಮಾವೇಶಗಳಲ್ಲಿ ಭಾಗವಹಿಸಲು, ಉದ್ಯೋಗ, ಅಧ್ಯಯನ, ಸಂಶೋಧನೆ, ವೈದ್ಯಕೀಯ ಉದ್ದೇಶ ಸೇರಿದಂತೆ ಇತರೆ ಉದ್ದೇಶಗಳಿಗಾಗಿ ಭಾರತಕ್ಕೆ ಬರುವುದು ಸುಲಭವಾಗಲಿದೆ.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: National News Tagged With: 0000000, Deferred Visas, Departure, Foreign Nationals, Foreign Visitors, International Passenger Arrivals, Medical Visa, OCI, PIO Card, Proximity to Indians, Travel Restrictions, Visa, ಅಂತಾರಾಷ್ಟ್ರೀಯ ಪ್ರಯಾಣಿಕರ ಆಗಮನ, ಆ ಮೂಲಕ ದೇಶಕ್ಕೆ ಆಗಮಿಸುವ, ಒಸಿಐ, ನಿರ್ಗಮನ, ನಿರ್ಗಮಿಸುವ ಭಾರತೀಯರು, ಪಿಐಒ ಕಾರ್ಡ್, ಪ್ರಯಾಣ ನಿರ್ಬಂಧಗಳನ್ನು, ಪ್ರವಾಸಿ ವೀಸಾ, ವಿದೇಶಿ ಪ್ರಜೆಗಳಿಗೆ ಅವಕಾಶ, ವೀಸಾ, ವೈದ್ಯಕೀಯ ವೀಸಾ, ಹಂತಹಂತವಾಗಿ ಸಡಿಲಿಸಲು ನಿರ್ಧರಿಸಿದ್ದು, ಹಾಲಿ ಇರುವ ವೀಸಾಗಳು

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,217 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...