
ಹೊನ್ನಾವರ: ಸಮಾಜಮುಖಿ ಕಾರ್ಯದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದ ಟಿ.ಎಸ್.ಕೊಂಡದಕೇರಿ(62) ಮಂಗಳವಾರ ಹೃದಯಘಾತದಿಂದ ನಿಧನರಾದರು.ತಾಲೂಕ ಪಂಚಾಯತ ಸದಸ್ಯರಾಗಿ ಮುಗ್ವಾ ಗ್ರಾಮ ಪಂಚಾಯತ ಅಧ್ಯಕ್ಷರಾಗಿ, ಸುಬ್ರಹ್ಮಣ್ಯ ದೇವಾಲಯದ ಟ್ರಸ್ಟಿಕಾರ್ಯನಿರ್ವಹಿಸುವ ಜೊತೆ ಪ್ರಸುತ್ತಸಾಲಿನ ಪಿಎಲ್.ಡಿ ಬ್ಯಾಂಕ್ ನಿರ್ದೇಶಕರಾಗಿ, ಇತ್ತಿಚಿಗೆ ನಡೆದ ಮಾರ್ಕೆಟಿಂಗ್ ಸೊಸೈಟಿ ಚುನಾವಣೆಯ ನಿರ್ದೇಶಕರಾಗಿ ಆಯ್ಕೆಯಾಗಿದ್ದರು.ಕಳೆದ ಕೆಲ ದಿನದ ಹಿಂದೆ ಕೊರೋನಾ ಸೊಂಕಿಗೆ ಒಳಪಟ್ಟು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಮಂಗಳವಾರ ಮಾರ್ಕೆಟಿಂಗ್ ಸೊಸೈಟಿ ಅಧ್ಯಕ್ಷರಾಗಿ ಅವಿರೋಧವಾಗಿಆಯ್ಕೆ ಆಗಿದ್ದರು. ಸ್ಪರ್ಧೆ ಮಾಡಿದ ಚುನಾವಣೆಯಲ್ಲಿ ಸೋಲಿಲ್ಲದ ಸರದಾರರಂತೆ ಜಯ ಗಳಿಸುವುದಲ್ಲದೆ ಪಂಚಾಯತ ವ್ಯಾಪ್ತಿಯಲ್ಲಿ ಉತ್ತಮ ಕಾರ್ಯನಿರ್ವಹಿಸುವ ಮೂಲಕ ಎಲ್ಲರಿಗೂ ಚಿರಪರಿಚಿತರಾಗಿದ್ದರು. ಅಧ್ಯಕ್ಷರಾಗಿ ಆಯ್ಕೆಯಾದ ದಿನವೇ ಇಹಲೋಕ ತ್ಯಜಿಸಿರುವುದು ಎಲ್ಲರಿಗೂ ನೋವು ತಂದಿದೆ. ಮೃತರು ಪತ್ನಿ ಇರ್ವರು ಪ್ರುತಿಯರನ್ನು ಹೊಂದಿದ್ದರು. ನಿಧನಕ್ಕೆ ಶಾಸಕ ದಿನಕರ ಶೆಟ್ಟಿ, ಸುನೀಲ ನಾಯ್ಕ,ಜಿಲ್ಲಾ ಪಂಚಾಯತ ಸದಸ್ಯೆ ಶ್ರೀಕಲಾ ಶಾಸ್ತಿ, ಬಿಜೆಪಿ ಮಂಡಲಾಧ್ಯಕ್ಷ ರಾಜೇಶ ಭಂಡಾರಿ, ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಸುಬ್ರಹ್ಮಣ್ಯ ಶಾಸ್ತ್ರಿ, ಮಾಜಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಸುರೇಶ ಶೆಟ್ಟಿ ಶ್ರೀಕಾಂತ ಮೋಗೇರ ಸೇರಿದಂತೆ ಪಕ್ಷದ ಮುಖಂಡರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ
Leave a Comment