ಹೊನ್ನಾವರ – ತಾಲೂಕಿನ ಸರಳಗಿ ಗ್ರಾಮದಲ್ಲಿ ಬುಧವಾರ ಸಂಜೆ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಗೆ ಬೃಹತ್ ಮರವೊಂದು ನಾರಾಯಣ ಹನುಮಂತ ನಾಯ್ಕ ಕರ್ನಕೋಡ ಎಂಬವರ ಮನೆಯ ಮೇಲೆ ಬಿದ್ದು ಮನೆ ಸಂಪೂರ್ಣ ಜಖಂಗೊಂಡ ಘಟನೆ ವರಿದಯಾಗಿದೆ.

ತಾಲೂಕಿನ ಬಹುತೇಕ ಕಡೆ ಬಿಸಿಲಿನ ವಾತಾವರಣವಿದ್ದಾಗಲೂ ಖರ್ವಾದಿಂದ ಗೇರಸೊಪ್ಪಾವರೆಗೆ ಬಿರುಗಾಳಿ ಸಹಿತ ಮಳೆಯಾಗಿ ಅಲ್ಲಲ್ಲಿ ಸಾಕಷ್ಟು ನಷ್ಟವಾಗಿದೆ. ಮನೆಯಮೇಲೆ ಮರ ಬಿದ್ದು ಹಾನಿಯಾಗಿದ್ದರೂ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಮನೆ ಕಳೆದುಕೊಂಡು ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಸ್ಥಳಿಯರಾದ ವಿನೋದ ನಾಯ್ಕ ಅವರು ಜೀವನಾವಶ್ಯಕ ವಸ್ತುಗಳನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ. ಅಧಿಕಾರಿಗಳು ಕಷ್ಟದಲ್ಲಿರುವ ಕುಟುಂಬಕ್ಕೆ ಸರ್ಕಾರದಿಂದ ನೆರವನ್ನು ಒದಗಿಸಬೇಕು ಎನ್ನುವ ಒತ್ತಾಯ ಕೇಳಿಬಂದಿದೆ.
Leave a Comment