ಕುಮಟಾ: ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಸರ್ದಾರ್ ವಲ್ಲಬಾಯಿ ಪಟೇಲ್ ಜಯಂತಿ ಹಾಗೂ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು.
ವಲ್ಲಬಾಯಿ ಪಟೇಲ್ ಹಾಗೂ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಜಿಲ್ಲಾ ಪ್ರಮುಖ ಹಾಗೂ ಸಿದ್ದಾಪುರ ಮಂಡಲ ಪ್ರಭಾರಿ ಪ್ರೋ.ಎಂ.ಜಿ.ಭಟ್ಟ ಮಾತನಾಡಿ, ಸರ್ದಾರ್ ವಲ್ಲಬಾಯಿ ಪಟೇಲ್ ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಲು ಮುಂಚೂಣಿಯಲ್ಲಿ ನಿಂತು ಹೋರಾಟ ನಡೆಸಿದ್ದಾರೆ.

ಸ್ವಾತಂತ್ರ್ಯಾನಂತರ ಭಾರತದ ಏಕೀಕರಣಕ್ಕೆ ಹೋರಾಟ ಮಾಡುವ ಮೂಲಕ ಸ್ವತಂತ್ರ್ಯ ರಾಜ್ಯಗಳು ಸಂವಿಧಾನದಡಿಯಲ್ಲಿ ಬರುವಂತೆ ಮಾಡಿದ್ದಾರೆ. ಅವರ ತತ್ವಾದರ್ಶಗಳು ನಮ್ಮಂತಹ ಯುವಕರಿಗೆ ಮಾರ್ಗದರ್ಶನವಾಗಿದೆ. ಅವರು ಹಾಕಿಕೊಟ್ಟ ದಾರಿಯಲ್ಲಿ ಸಾಗುವ ಮೂಲಕ ಭಾರತವನ್ನು ವಿಶ್ವಗುರು ಸ್ಥಾನಕ್ಕೆ ಕೊಂಡೊಯ್ಯಲು ನಾವೆಲ್ಲರೂ ಶ್ರಮಿಸಬೇಕು ಎಂದರು.
ಬಿಜೆಪಿ ಮಂಡಲಾಧ್ಯಕ್ಷ ಹೇಮಂತಕುಮಾರ ಗಾಂವಕರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಮುಖ ಮದನ ನಾಯಕ, ಜಿಲ್ಲಾ ಕಾರ್ಯದರ್ಶಿ ಪ್ರಶಾಂತ ನಾಯ್ಕ, ಮಂಡಲ ಪ್ರಧಾನ ಕಾರ್ಯದರ್ಶಿ ವಿನಾಯಕ ನಾಯ್ಕ, ಮಂಡಲ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Leave a Comment