ಯಲ್ಲಾಪುರ:
ರಾಜ್ಯೋತ್ಸವ ಪ್ರಶಸ್ತಿ ಬಂದಿರುವುದು ಅಪೂರ್ವ ಕ್ಷಣ. ಇದರ ಶ್ರೇಯ ತಾಲೂಕಿನ ಜನರಿಗೆ ಸಲ್ಲಬೇಕು ಎಂದು ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಸಹಕಾರಿ ಧುರೀಣ ಎನ್.ಎಸ್. ಹೆಗಡೆ ಕುಂದರಗಿ ಹೇಳಿದರು.

ಅವರು ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ತಾಲೂಕಾಡಳಿತ ವತಿಯಿಂದ ಹಮ್ಮಿಕೊಂಡಿದ್ದ 65 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಸಹಕಾರಿ ಧುರೀಣ ಎನ್.ಎಸ್. ಹೆಗಡೆ ಕುಂದರಗಿ ಹಾಗೂ ಕಳೆದ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪರಶುರಾಮ ಸಿದ್ದಿ ಮಂಚಿಕೇರಿ ಅವರನ್ನು ಸನ್ಮಾನಿಸಲಾಯಿತು. ಕಳೆದ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಹೆಚ್ಚಿನ ಅಂಕ ಗಳಿಸಿದ ಬಿಸಗೋಡ ಸರ್ಕಾರಿ ಪ್ರೌಢಶಾಲೆಯ ಸ್ನೇಹಾ ದತ್ತಾತ್ರೇಯ ಬೋಳಗುಡ್ಡೆ, ಸ್ವಾತಿ ವೆಂಕಟ್ರಮಣ ಭಟ್ಟ ಹಾಗೂ ಉಮ್ಮಚಗಿ ಸರ್ಕಾರಿ ಪ್ರೌಢಶಾಲೆಯ ಶ್ರೀವತ್ಸ ಭಟ್ಟ ಅವರಿಗೆ ಸರ್ಕಾರ ನೀಡಿದ ಲ್ಯಾಪ್ಟಾಪ್ಗಳನ್ನು ವಿತರಿಸಲಾಯಿತು. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ವಿಶ್ವದರ್ಶನ ಆಂಗ್ಲಮಾಧ್ಯಮ ಪ್ರೌಢಶಾಲೆ ಹಾಗೂ ವಜ್ರಳ್ಳಿಯ ಸರ್ವೋದಯ ಪ್ರೌಢಶಾಲೆಗಳಿಗೆ ಪ್ರಮಾಣಪತ್ರ ನೀಡಲಾಯಿತು.
ತಹಸೀಲ್ದಾರ ಗಣಪತಿ ಶಾಸ್ತ್ರಿ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ ಅಧ್ಯಕ್ಷೆ ಚಂದ್ರಕಲಾ ಭಟ್ಟ, ಸದಸ್ಯೆ ರಾಧಾ ಹೆಗಡೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಪ್ರಮೋದ ಹೆಗಡೆ, ಅಡಕೆ ವ್ಯವಹಾರಸ್ಥರ ಸಂಘದ ಅಧ್ಯಕ್ಷ ಎಂ. ಆರ್. ಹೆಗಡೆ ಕುಂಬ್ರಿಗುಡ್ಡೆ, ನಿವೃತ್ತ ಪ್ರಾಂಶುಪಾಲ ಬೀರಣ್ಣ ನಾಯಕ ಮೊಗಟಾ, ತಾ.ಪಂ ಇಒ ಜಗದೀಶ ಕಮ್ಮಾರ, ನಿವೃತ್ತ ತಹಸೀಲ್ದಾರ ಡಿ. ಜಿ. ಹೆಗಡೆ, ಬಿಇಒ ಎನ್. ಆರ್. ಹೆಗಡೆ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೇಣುಗೋಪಾಲ ಮದ್ಗುಣಿ, ಲೋಕೋಪಯೋಗಿ ಇಲಾಖೆಯ ಎಇಇ ವಿ.ಎಂ.ಭಟ್ಟ ಇತರರಿದ್ದರು. ಶಿಕ್ಷಕ ಸದಾನಂದ ದಬಗಾರ ನಿರ್ವಹಿಸಿದರು.
Leave a Comment