ಹಳಿಯಾಳ : ಹಳಿಯಾಳ ಪಟ್ಟಣದಲ್ಲಿ 65 ನೇ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು.
ಪಟ್ಟಣದ ಮಿನಿ ವಿಧಾನಸೌಧದ ಎದುರು ನಡೆದ ಸಮಾರಂಭದಲ್ಲಿ ತಾಯಿ ಭುವನೇಶ್ವರಿದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸಿದರು.

ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ, ಜಿಪಂ ಉಪಾಧ್ಯಕ್ಷ ಸಂತೋಷ ರೆಣಕೆ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಬಸವರಾಜ ಬೆಂಡಿಗೇರಿಮಠ, ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಅಧ್ಯಕ್ಷ. ವಿಲಾಸ ಕಣಗಲಿ, ತಾಲೂಕಾಧ್ಯಕ್ಷ ಶಿರಾಜ ಮುನವಳ್ಳಿ, ಪುರಸಭೆ ಹಾಗೂ ತಾಪಂ ಸದಸ್ಯರು ,ಅಸಿಸ್ಟೆಂಟ್ ಎಸ್ಪಿ ಕುಶಾಲ್ ಚೌಕ್ಸಿ, ತಹಶಿಲ್ದಾರ್ ವಿದ್ಯಾಧರ ಗುಳಗುಳೆ,ವಿವಿಧ ಸಂಘಟನೆಯ ಪದಾಧಿಕಾರಿಗಳು, ಎಲ್ಲ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವರ್ಗವದವರು ಇದ್ದರು.
Leave a Comment