ಯಲ್ಲಾಪುರ:
ಮಿನಿ ಲಾರಿಯೊಂದರಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 6 ಜಾನುವಾರುಗಳನ್ನು ಪಟ್ಟಣದ ಜೋಡುಕೆರೆ ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ 3 ಜನರನ್ನು ಬಂಧಿಸಲಾಗಿದೆ.
ಬಂಧಿತರನ್ನು ಹರಿಯಾಣದ ಬಿವಾಣಿಯ ಮನಪೂಲ್ಸಿಂಗ್ ಜಗನ್ನಾಥ, ಈಶ್ವರ ಸಿಂಗ್ ವಿಜಯ ಸಿಂಗ್ ಹಾಗೂ ಕೇರಳದ ರಿಜಿ ಫಿಲೀಫ್ ಎಂದು ಗುರುತಿಸಲಾಗಿದೆ.
ಇವರು ಹರಿಯಾಣದಿಂದ ಕೇರಳದ ಕಡೆಗೆ ಮಿನಿ ಲಾರಿಯಲ್ಲಿ 5 ಎಮ್ಮೆಗಳು ಹಾಗೂ ಒಂದು ಹಸುವನ್ನು ಹಿಂಸಾತ್ಮಕವಾಗಿ ತುಂಬಿಕೊಂಡು, ಬಲಿಕೊಡುವ ಉದ್ದೇಶದಿಂದ ಸಾಗಿಸುತ್ತಿದ್ದರು. ಪಟ್ಟಣದ ಜೋಡುಕೆರೆ ಬಳಿ ಪೊಲೀಸರು ಲಾರಿಯನ್ನು ತಡೆದು ತಪಾಸಣೆ ನಡೆಸಿದಾಗ ಅಕ್ರಮ ಸಾಗಾಟದ ಸಂಗತಿ ಬಯಲಾಗಿದೆ. 6 ಜಾನುವಾರುಗಳನ್ನು ರಕ್ಷಿಸಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Comment