ಹೊನ್ನಾವರ: ತಾಲೂಕಿನ ಕಾಸರಕೋಡ ಹಿರೆಮಠ ವೀರ ಮಾರುತಿ ದೇವಸ್ಥಾನದ ಬಾಗಿಲಿನ ಬೀಗ ಮುರಿದು ದೇವಸ್ಥಾನದ ಕಾಣಿಕೆ ಹುಂಡಿಯ ಅಂದಾಜು ೭ ಸಾವಿರ ನಗದು, ದೇವರ ಕೊರಳಿನ ೨೦ ಗ್ರಾಂ ತೂಕದ ೮೦ ಸಾವಿರ ಮೌಲ್ಯದ ಬಂಗಾರದ ಸರವು ಕಳ್ಳತನ ಮಾಡಿದ ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಹೊನ್ನಾವರ ಪಿಎಸೈ ಸಾವಿತ್ರಿ ನಾಯಕ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.





Leave a Comment