ಯಲ್ಲಾಪುರ:
ಎಟಿಎಂನಿಂದ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಕಾರ್ಡ್ ಬದಲಿಸಿ, ಹಣ ಡ್ರಾ ಮಾಡುತ್ತಿದ್ದ ಅಂತರ್ ರಾಜ್ಯ ಕಳ್ಳನನ್ನು ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವೇಣುಗೋಪಾಲ ಕೃಷ್ಣ ರೆಡ್ಡಿ ಎಂದು ಗುರುತಿಸಲಾಗಿದೆ. ಈತ 2019 ರ ಡಿಸೆಂಬರ್ನಲ್ಲಿ ಯಲ್ಲಾಪುರದ ವ್ಯಕ್ತಿಯೋರ್ವರಿಗೆ ಎಟಿಎಂನಲ್ಲಿ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಅವರಿಂದ ಕಾರ್ಡ್ ಪಡೆದು, ಅದನ್ನು ಬದಲಿಸಿ ಬೇರೆ ಕಾರ್ಡನ್ನು ಅವರಿಗೆ ನೀಡಿದ್ದ. ನಂತರ ಅವರ ಕಾರ್ಡ್ ಬಳಸಿ 40,000 ರೂ ಹಣ ಡ್ರಾ ಮಾಡಿದ್ದ. ಈ ಕುರಿತು ಪ್ರಕರಣ ದಾಖಲಾಗಿತ್ತು.

ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆತನಿಂದ 18,880 ರೂ ನಗದು ವಶಪಡಿಸಿಕೊಳ್ಳಲಾಗಿದೆ. ವಿಚಾರಣೆ ವೇಳೆ ಈತ ಗೌರಿಬಿದನೂರು, ಮಧುಗಿರಿ, ಬಾಗೇಪಲ್ಲಿ, ಮಡಿವಾಳ, ಆಂಧ್ರಪ್ರದೇಶದ ಚಿತ್ತೂರುಗಳಲ್ಲಿಯೂ ಈತನ ವಿರುದ್ಧ ಇದೇ ಮಾದರಿಯ ಪ್ರಕರಣಗಳು ದಾಖಲಾಗಿರುವ ಬಗ್ಗೆ ಮಾಹಿತಿ ಬಹಿರಂಗಗೊಂಡಿದೆ. ಎಸ್ಪಿ ಶಿವಪ್ರಕಾಶ ದೇವರಾಜು, ಡಿಎಸ್ಪಿ ಜಿ. ಟಿ. ನಾಯಕ ಮಾರ್ಗದರ್ಶನದಲ್ಲಿ ಸಿಪಿಐ ಸುರೇಶ ಯಳ್ಳೂರ ನೇತೃತ್ವದಲ್ಲಿ ಪಿಎಸ್ಐಗಳಾದ ಮಂಜುನಾಥ ಗೌಡರ್, ಭೀಮಸಿಂಗ್ ಲಮಾಣಿ, ಸಿಬ್ಬಂದಿ ಬಸವರಾಜ ಹಗರಿ, ಮಹಮ್ಮದ್ ಶಫಿ, ಗಜಾನನ ನಾಯ್ಕ, ವಿನೋದ ರೆಡ್ಡಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Leave a Comment