ಪಟ್ಟಣದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾ ಕಛೇರಿಯಲ್ಲಿ ಜ್ಞಾನ ತಾಣ ಕಾರ್ಯಕ್ರಮವನ್ನು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಉದ್ಘಾಟಿಸಿದರು. ಜ್ಞಾನ ತಾಣ ಕಾರ್ಯಕ್ರಮದ ಕರಪತ್ರವನ್ನು ಬಿಡುಗಡೆ ಮಾಡಿ, ಈ ಯೋಜನೆಯ ಅಡಿಯಲ್ಲಿ ಆಯ್ಕೆಯಾದ ಗ್ರಾಮೀಣ ಭಾಗದ ವಿಧ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಾಗೂ ಟ್ಯಾಬ್ನ್ನು ಸಚಿವರು ವಿತರಿಸಿದರು.
ಈ ಕಾರ್ಯಕ್ರಮದಲ್ಲಿ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ, ಬಿಇಒ ಎನ್.ಆರ್.ಹೆಗಡೆ ಮುಂತಾದವರಿದ್ದರು.
Leave a Comment