ಹಳಿಯಾಳ:- ಹಳಿಯಾಳ ಪುರಸಭೆಯ ಆಡಳಿತ ಮಂಡಳಿಯ ನೂತನ ಅಧ್ಯಕ್ಷ ಅಜರುದ್ದೀನ್ ಬಸರಿಕಟ್ಟಿ ಅವರು ಮಂಗಳವಾರ ಹಳಿಯಾಳ ಪಟ್ಟಣದಲ್ಲಿ ಪುರಸಭೆಯಿಂದ ನಡೆಯುತ್ತಿರುವ ಅಭಿವೃದ್ದಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಹಳಿಯಾಳ ಪುರಸಭೆಗೆ ಸದಸ್ಯರಾಗಿ ಆಯ್ಕೆಯಾದ 2 ವರ್ಷ 2 ತಿಂಗಳುಗಳ ಬಳಿಕ ಪುರಸಭೆಯ ಆಡಳಿತ ಮಂಡಳಿ ರಚನೆಯಾಗಿದ್ದು ಯುವಕರಾಗಿರುವ ನೂತನ ಅಧ್ಯಕ್ಷ ಅಜರುದ್ದೀನ್ ಬಸರಿಕಟ್ಟಿ ಹಾಗೂ ಉತ್ಸಾಹಿ ಮಹಿಳೆ ಉಪಾಧ್ಯಕ್ಷೆ ಸುವರ್ಣಾ ಮಾದರ್ ಅವರು ಜಂಟಿಯಾಗಿ ಮಂಗಳವಾರ ಪಟ್ಟಣದಲ್ಲಿ ನಿರ್ಮಿಸಲಾಗುತ್ತಿರುವ ನೂತನ ಪುರಸಭೆ ಕಾರ್ಯಾಲಯ, ಪೌರಕಾರ್ಮಿಕರ ವಸತಿ ಗೃಹ ಕಟ್ಟಡ ಸೇರಿದಂತೆ ಇತರೆಡೆ ತೆರಳಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಯಾವುದೇ ಕಾರಣಕ್ಕೂ ಎಲ್ಲಿಯೂ ಕಳಪೆ ಕಾಮಗಾರಿ ನಡೆಯಬಾರದು ಹಾಗೂ ಕಾಮಗಾರಿಗಳು ವಿಳಂಬಗತಿಯಲ್ಲಿ ಸಾಗದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಅಧ್ಯಕ್ಷರು ಸೂಚಿಸಿದರು.
ಪುರಸಭೆ ಮುಖ್ಯಾಧಿಕಾರಿ ಕೇಶವ ಚೌಗಲೆ, ಇಂಜೀನಿಯರ್ ಹರೀಶ ಸೇರಿದಂತೆ ಇತರರು ಇದ್ದು ಅಭಿವೃದ್ದಿ ಕಾಮಗಾರಿಗಳ ಮಾಹಿತಿ ನೀಡಿದರು.
Leave a Comment