ಹಳಿಯಾಳ: ತಾಲೂಕಿನ ಬಿಕೆ ಹಳ್ಳಿ ಗ್ರಾಮದಲ್ಲಿ ಸಾರ್ವಜನೀಕ ಸ್ಥಳದಲ್ಲಿ ಜೂಜಾಟದಲ್ಲಿ ತೊಡಗಿದ್ದವರನ್ನು ಬಂಧಿಸುವಲ್ಲಿ ಹಳಿಯಾಳ ಪೋಲಿಸರು ಯಶಸ್ವಿಯಾಗಿದ್ದಾರೆ.

ಶುಕ್ರವಾರ ಅಷ್ಟೇ ಅಸಿಸ್ಟಂಟ್ ಎಸ್ಪಿ ಐಪಿಎಸ್ ಅಧಿಕಾರಿ ಕುಶಾಲ್ ಚೌಕ್ಸೆ ಅವರು ದೀಪಾವಳಿ ಹಬ್ಬದ ನೆಪ ಮಾಡಿ ಜೂಜಾಟದಲ್ಲಿ ತೊಡಗಿದರೇ ಅಂತಹವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.
ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿ ಬಿಕೆ ಹಳ್ಳಿ ಗ್ರಾಮದ ಸತ್ಯನಾರಾಯಣ ದೇವಸ್ಥಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಜೂಜಾಟದಲ್ಲಿ ತೊಡಗಿದ್ದ 6 ಜನರಾದ ಗಣಪತಿ, ಪ್ರಕಾಶ, ಗುಂಡು, ಪರಶುರಾಮ್, ಮಹಾಂತೇಶ, ಲಕ್ಷ್ಮಣ ಎನ್ನುವವರನ್ನು ಬಂಧಿಸಿದ್ದು ಇನ್ನಿಬ್ಬರು ಆರೋಪಿಗಳಾದ ಗುರು ಹಾಗೂ ವಿಷ್ಣು ಪರಾರಿಯಾಗಿರುವ ಕುರಿತು ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment