• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮೂಡ್ನಳ್ಳಿಯಲ್ಲಿ ದೀಪಾವಳಿ ಸಂಭ್ರಮ: ಗಮನ ಸೆಳೆದ ಹೋರಿಗಳ ಓಟ

November 16, 2020 by Sachin Hegde Leave a Comment

ಕಾರವಾರ:

ರೈತರ ಪಾಲಿನ ದೊಡ್ಡ ಹಬ್ಬ ಅಂದ್ರೆ ಅದು ದೀಪಾವಳಿ. ಬಲೀಂದ್ರನನ್ನು ತಂದು ಪೂಜೆ ಸಲ್ಲಿಸುವುದರ ಜತೆಗೆ ರೈತರ ಓಡನಾಡಿ ಗೋವುಗಳಿಗೂ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಮಾತ್ರವಲ್ಲದೆ ಗೋವುಗಳನ್ನು ಸೃಂಗರಿಸಿ ಅವುಗಳನ್ನು ಬೆದರಿಸುವ ಮೂಲಕ ಇಲ್ಲೊಂದು ಗ್ರಾಮದಲ್ಲಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ್ದು ಈ ಕುರಿತ ಒಂದು ವರದಿ ಇಲ್ಲಿದೆ ನೋಡಿ.
ಒಂದೆಡೆ ಕಾಲ್ಕಿತ್ತು ಓಡುತ್ತಿರೋ ಹೋರಿಗಳು. ಇನ್ನೊಂದೆಡೆ ಅವುಗಳನ್ನು ಹಿಡಿಯಲು ಹರಸಾಹಸ ಪಡುತ್ತಿರೋ ಯುವಕರು, ಮತ್ತೊಂದೆಡೆ ಈ ಸಾಹಸಮಯ ದೃಶ್ಯಗಳನ್ನು ಕಣ್ಣುಂಬಿಕೊಳ್ಳುತ್ತಿರುವ ಸಾರ್ವಜನಿಕರು, ಅರೆ ಇದೇನೂ ಹೋರಿ ಓಡಿಸೊ ಸ್ಪರ್ಧೆ ಅಂಡ್ಕೊಂಡ್ರಾ . . . ? ಖಂಡಿತಾ ಅಲ್ಲ . . . ! ರೈತರ ಪಾಲಿನ ದೊಡ್ಡಹಬ್ಬ ಎಂದೇ ಕರೆಸಿಕೊಳ್ಳುವ ದೀಪಾವಳಿ ಸಂಭ್ರಮ. 
ಹೌದು, ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಮೂಡ್ನಳ್ಳಿ ಗ್ರಾಮದಲ್ಲಿ ಕಂಡುಬಂದ ದೀಪಾವಳಿ ಸಂಭ್ರಮದ ದೃಶ್ಯಗಳಿವು. ರೈತರ ಪಾಲಿಗೆ ದೊಡ್ಡ ಹಬ್ಬ ಎಂದೇ ಕರಿಸಿಕೊಳ್ಳುವ ಹಬ್ಬವನ್ನು ಇಂದು ಊರಿನ ಜನರು ಅದ್ದೂರಿಯಾಗಿ ಆಚರಿಸಿದ್ರು. ಬಲೀಂದ್ರನನ್ನು ತಂದು ವಿಶೇಷ ಪೂಜೆ ಸಲಿಸಿದ ರೈತರು ಬಲಿಪಾಡ್ಯ ದಿನವಾದ ಇಂದು ಗೋವುಗಳಿಗೆ ಸಿಂಗಾರ, ರೊಟ್ಟಿ, ಪತ್ತೆತೆನ್ನೆ ಎಲೆಗಳಿಂದ ಮಾಡಿದ ದಂಡೆಗಳನ್ನು ಕಟ್ಟಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಅವುಗಳನ್ನು ಚೌಲೂ, ಬಲೂನ್, ಬಾಸಿಂಗ ಸೇರಿದಂತೆ ಬಣ್ಣದ ಕಾಗದ ಹೂವುಗಳಿಂದ ಶೃಂಗರಿಸಿ ಬೆದರಿಸಲಾಯಿತು. 

ಇನ್ನು ಮೂಡ್ನಳ್ಳಿ ಗ್ರಾಮದಲ್ಲಿರುವ ಬಹುಸಂಖ್ಯಾತ ಒಕ್ಕಲಿಗ ಸಮುದಾಯದವರು  ಸೇರಿದಂತೆ ಇತರೆ ಸಮುದಾಯದವರು ಒಟ್ಟಾಗಿ ಹಬ್ಬವನ್ನು ಆಚರಿಸುತ್ತಾರೆ. ಪ್ರತಿ ವರ್ಷದಂತೆ ಈ ವರ್ಷವೂ ಅದ್ದೂರಿಯಾಗಿಯೇ ಹಬ್ಬವನ್ನು ಆಚರಿಸಲಾಗಿದೆ. ಗೋವುಗಳನ್ನು ಗೋಳಿಗೆ ತಂದು ಅವುಗಳನ್ನು ಬೆದರಿಸುವ ಮೂಲಕ ಸಂಭ್ರಮಿಸಿದರು. ಇನ್ನು ಗ್ರಾಮದಲ್ಲಿ ಕಳೆದ ಮೂರು ವರ್ಷಗಳಿ‌ಂದ ಎಣ್ಣೆಕಂಬ ಸ್ಪರ್ಧೆ ಏರ್ಪಡಿಸಲಾಗುತ್ತಿದೆ. ಈ ಭಾರಿ ಕೂಡ ಎಣ್ಣೆಕಂಬ ಸ್ಪರ್ಧೆ ಇಟ್ಟಿದ್ದು, ಊರ ಯುವಕರು ಸೇರಿದಂತೆ ಪರ ಊರಿನ ಜನರು ಉತ್ಸಾಹದಲ್ಲಿ ಭಾಗವಹಿಸಿ ಎಣ್ಣೆಕಂಬ ಏರಲು ಪ್ರಯತ್ನಿಸಿದರು‌. 


 ಒಟ್ಟಾರೆ ಬೆಳಕಿನ ಹಬ್ಬ ದೀಪಾವಳಿಯನ್ನು ಈ ಭಾಗದ ರೈತರು ಗೋವುಗಳೊಂದಿಗೆ ಆಚರಿಸುವ ಸಂಪ್ರದಾಯ ತಲೆ ತಲಾಂತರಗಳಿಂದ ಇದೆ. ಈ ಭಾರಿಯೂ ರೈತರು ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದು ಹೋರಿಗಳ ಓಟ, ಹಾರಟ ನೋಡುಗರ ಗಮನ ಸೆಳೆಯಿತು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Kumta News, Trending, ವಿಡಿಯೋ, ಸಂಸ್ಕೃತಿ-ಕಲೆ Tagged With: catching youngsters, cow worship, diwali celebration, Farmers' big fest, gho pooja, goats rolling around, Hori Odyssey competition, multicultural community, roaring race, ಗೋವುಗಳನ್ನು ಗೋಳಿ, ಬಹುಸಂಖ್ಯಾತ ಒಕ್ಕಲಿಗ ಸಮುದಾಯ, ರೈತರ ಪಾಲಿನ ದೊಡ್ಡಹಬ್ಬ, ಹಿಡಿಯಲು ಹರಸಾಹಸ ಪಡುತ್ತಿರೋ ಯುವಕರು, ಹೋರಿ ಓಡಿಸೊ ಸ್ಪರ್ಧೆ, ಹೋರಿಗಳ ಓಟ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar