ಗೋವಾದ ಮಾಜಿ ರಾಜ್ಯಪಾಲರಾದ ಶ್ರೀಮತಿ ಮೃದುಲಾ ಸಿನ್ಹ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
“ಸಾಮಾಜಿಕ ಸೇವೆಗಾಗಿ ಶ್ರಮಿಸಿದ ಮೃದುಲಾ ಸಿನ್ಹ ಅವರು ಸದಾ ಸ್ಮರಿಸಲ್ಪಡುತ್ತಾರೆ. ಅವರು ಉತ್ತಮ ಬರಹಗಾರರೂ ಆಗಿದ್ದರು. ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕಕ್ಕೆ ದೊಡ್ಡ ಕೊಡುಗೆ ನೀಡಿದ್ದರು. ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ” ಎಂದು ಟ್ವೀಟ್ ನಲ್ಲಿ ಪ್ರಧಾನಮಂತ್ರಿ ತಿಳಿಸಿದ್ದಾರೆ.
Leave a Comment