• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮೊಬೈಲ್ ಬಳಕೆ ಮಕ್ಕಳಲ್ಲಿ ಓದುವ ಆಸಕ್ತಿಯನ್ನು ಕಡಿಮೆ ಮಾಡಿದೆ; ಶಿವಪ್ಪ

November 20, 2020 by Vishwanath Shetty Leave a Comment

ಗ್ರಾಮ ಪಂಚಾಯತ್ ಸಾಲ್ಕೋಡ, ಡಾ|| ದಿನಕರ ದೇಸಾಯಿ ಗ್ರಂಥಾಲಯ ಇವರ ಸಂಯುಕ್ತ ಆಶ್ರಯದಲ್ಲಿ  “ಓದುವ ಬೆಳಕು” ಎನ್ನುವ ಕಾರ್ಯಕ್ರಮ ಆಯೋಜಿಸಲಾಯಿತು.  ಕಾರ್ಯಕ್ರಮವನ್ನು ಎಸ್.ಕೆ.ಪಿ ಜ್ಯೂನಿಯರ್ ಕಾಲೇಜಿನ ಇತಿಹಾಸ ಉಪನ್ಯಾಸಕ ಶಿವಪ್ಪ ರವರು ಉದ್ಘಾಟಿಸಿದರು.

IMG 20201120 WA0043

ನಂತರ ಮಾತನಾಡಿ, ಪುಸ್ತಕದ ಓದು ಆತ್ಮವಿಶ್ವಾಸವನ್ನು ಹೆಚ್ಚಿಸುವ ಜೊತೆ ಜ್ಞಾನ ವರ್ಧನೆಯಾಗುತ್ತದೆ. ಇಂದಿನ ಅನಿವಾರ್ಯತೆಯ ಮೊಬೈಲ್ ಬಳಕೆ ಮಕ್ಕಳಲ್ಲಿ ಓದುವ ಆಸಕ್ತಿಯನ್ನು ಕಡಿಮೆ ಮಾಡಿದೆ. ಆ ನಿಟ್ಟಿನಲ್ಲಿ ಓದುವ ಬೆಳಕು ಕಾರ್ಯಕ್ರಮ ಮಕ್ಕಳ  ಓದುವ  ಪ್ರಕ್ರಿಯೆಗೆ ಉತ್ತಮ ಅವಕಾಶವಾಗುವ ಉಪಯುಕ್ತ ಕಾರ್ಯಕ್ರಮವಾಗಿದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಾಲ್ಕೋಡ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವೆಂಕಟರಮಣ ಪಟಗಾರ, ಕೋವಿಡ್ 19 ರ ಸಂಕಷ್ಟದಿಂದಾಗಿ ದೇಶದ ಮಕ್ಕಳು ಸಾಮಾಜಿಕವಾಗಿ ಶೈಕ್ಷಣಿಕವಾಗಿ ಮಾನಸಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದು ಶಾಲೆಗಳು ಮುಚ್ಚಿರುವುದರಿಂದ ಕಲಿಕೆಯಲ್ಲಿ ಉಂಟಾಗಿರುವ ನಷ್ಟದ ಜೊತೆಗೆ ಶೈಕ್ಷಣಿಕ ಬೆಳವಣಿಗೆಗೂ ಹಿನ್ನಡೆಯಾಗಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಬಾಲ್ಯವಿವಾಹ ಮತ್ತು ಬಾಲಕಾರ್ಮಿಕರಾಗುವಂತಹ ಸನ್ನಿವೇಶ ಎದುರಾಗುತ್ತಿದೆ.

IMG 20201120 WA0043

ಮಕ್ಕಳಿಗೆ ಆಗುತ್ತಿರುವ ಮತ್ತಷ್ಟು ನಷ್ಟವನ್ನು ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಯು ಗ್ರಂಥಾಲಯಗಳನ್ನು ಗ್ರಾಮೀಣ ಪ್ರದೇಶದ ಜ್ಞಾನ ಕೇಂದ್ರಗಳಾಗಿ  ಅಭಿವೃದ್ಧಿ ಪಡಿಸುವ ಮೂಲಕ ಹಾಗೂ ಗ್ರಂಥಾಲಯಗಳು ಮಕ್ಕಳ ಕಲಿಕೆಗೆ ಆಶಾಕಿರಣ ವಾಗುವ ಮೂಲಕ ಅವರ ಉಜ್ವಲ ಭವಿಷ್ಯಕ್ಕೆ ದಾರಿದೀಪ ವಾಗಬೇಕಾಗಿದೆ ಎಂದರು.  ಎಸ್.ಡಿ.ಎಂ.ಸಿ ಅಧ್ಯಕ್ಷ ಎಂ ಎಸ್ ಶೆಟ್ಟಿ , ಶಾಲೆಯ ಶಿಕ್ಷಕಿ ಗಾಯತ್ರಿ ನಾಯ್ಕ, ಮೇಲ್ವಿಚಾರಕಿ ಜ್ಯೂತಿ ಶೆಟ್ಟಿ, ಮಹೇಶ ಭಂಡಾರಿ ಹಾಜರಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲ ಮಕ್ಕಳಿಗೆ ಉಚಿತವಾಗಿ ಪುಸ್ತಕವನ್ನು ವಿತರಿಸಿ ಅವರ ಸದಸ್ಯತ್ವ ನೋಂದಣಿಯನ್ನು ಉಚಿತವಾಗಿ ಮಾಡಲಾಯಿತು.

IMG 20201120 WA0044

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Honavar News

Explore More:

About Vishwanath Shetty

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,009 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...