
ಹೊನ್ನಾವರ: ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರಾದ ಎನ್.ಎಸ್.ನಾಯ್ಕ ಇವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಕಾರ್ಯಕರಣಿ ಸಭೆಯಲ್ಲಿ ರಾಜ್ಯಧ್ಯಕ್ಷ ಷಡಕ್ಷರಿ ಜಿಲ್ಲಾಧ್ಯಕ್ಷ ಸಂಜೀವಕುಮಾರ್, ತಾಲೂಕ ಅಧ್ಯಕ್ಷ ಆರ್.ಟಿ.ನಾಯ್ಕ ಅಣ್ಣಪ್ಪ ಮುಕ್ರಿ ಹಾಗೂ ಎಲ್ಲಾ ಇಲಾಖೆಯ ಪದಾಧಿಕಾರಿಗಳ ಸಲಹೆ ಮೇರೆಗೆ ಆಯ್ಕೆ ಮಾಡಲಾಗಿದೆ. ಈ ಹಿಂದೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷರಾಗಿ, ಜಿಲ್ಲಾ ಸಂಘದ ಕಾರ್ಯದರ್ಶಿಯಾಗಿ, ಶಿಕ್ಷಕ ಸಂಘದ ಪದಾಧಿಕಾರಿಯಾಗಿ ಈ ಹಿಂದೆ ಕಾರ್ಯನಿರ್ವಹಿಸಿದ್ದರು.
Leave a Comment