ಕುಮಟಾ: ಅರಣ್ಯ ಇಲಾಖೆಯ ವನ್ಯ ಜೀವಿ ಸಂರಕ್ಷಣೆ ವಿಭಾಗದ ಉಪ ವಲಯ ಅರಣ್ಯಾಧಿಕಾರಿಯಾಗಿ ಕೆಲಸ ಮಾಡುತ್ತಿರುವ ಹರಿಶ್ಚಂದ್ರ ಪಟಗಾರ ಹಾಗೂ ಅರಣ್ಯ ಸಂರಕ್ಷಣೆ ವಿಭಾಗದಲ್ಲಿ ವೀಕ್ಷಕರಾಗಿ ಕೆಲಸ ಮಾಡುತ್ತಿರುವ ಗೋಪಾಲ ಗೌಡ ಅವರಿಗೆ ಅತ್ಯುತ್ತಮ ಸೇವೆಗಾಗಿ ಮುಖ್ಯ ಮಂತ್ರಿ ಚಿನ್ನದ ಪದಕ ಲಭಿಸಿದೆ. ಸೋಮವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಶಸ್ತಿ ವಿತರಿಸಿದರು.
ಮೂಲತಃ ಮಿರ್ಜಾನ ಗ್ರಾಮದ ಹರಿಶ್ಚಂದ್ರ ಪಟಗಾರ 2018ರಲ್ಲಿ ಇಲಾಖೆಯ ಹೊನ್ನಾವರ ವಲಯದಲ್ಲಿ ಸಲ್ಲಿಸಿದ್ದ ಸೇವೆ ಪರಿಗಣಿಸಿ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆ ಆಯ್ಕೆ ಮಾಡಲಾಗಿದೆ. ಸದ್ಯ ಕತಗಾಲ ವಲಯದಲ್ಲಿ ವನ್ಯ ಜೀವಿ ಸಂರಕ್ಷಣೆ ಮಾಡುತ್ತಿದ್ದಾರೆ. ಅಂಕೋಲಾ ತಾಲ್ಲೂಕಿನ ಹಡವ ಗ್ರಾಮದ ಗೋಪಾಲ ಗೌಡ ಅವರು ಕುಮಟಾ ವಲಯದ ಬಡಾಳದಲ್ಲಿ ಅರಣ್ಯ ವೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು, 2018 ನೇ ಸಾಲಿನ ಅತ್ಯುತ್ತಮ ಸೇವೆಗಾಗಿ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆ ಮಾಡಲಾಗಿದೆ ಎಂದು ಕುಮಟಾ ಆರ್‌ಎಫ್‌ಒ ಪ್ರವೀಣ ನಾಯಕ ತಿಳಿಸಿದರು.
Leave a Comment