ಹೊನ್ನಾವರ : ಗ್ರಾಮ ಪಂಚಾಯತ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳಾಗಲು ಸ್ಥಳೀಯ ಮಟ್ಟದಲ್ಲಿ ಸಹಜವಾಗಿ ಆಕಾಂಕ್ಷಿಗಳಲ್ಲಿ ಪೈಪೋಟಿ ಇರುತ್ತಿದ್ದು, ಪಕ್ಷದ ಒಮ್ಮತದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗುವಂತೆ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಕಿಸಾನ್ ವಿಭಾಗದ ಅಧ್ಯಕ್ಷರು ಹಾಗೂ ಹಳದೀಪುರ ಜಿಲ್ಲಾ ಪಂಚಾಯತ ಸದಸ್ಯರಾದ ಶಿವಾನಂದ ಹೆಗಡೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಮುಂಬರುವ ಗ್ರಾಮ ಪಂಚಾಯತ ಚುನಾವಣೆಯನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ, ಪಟ್ಟಣದ ಸೋಶಿಯಲ್ ಕ್ಲಬ್ ಸಭಾಭವನದಲ್ಲಿ ಏರ್ಪಡಿಸಿದ ಪೂರ್ವಭಾವಿ ಸಭೆಯನ್ನು ಉದ್ದÉೀಶಿಸಿ ಮಾತನಾಡುತ್ತಿದ್ದರು. ತನ್ನಿಂದಲೇ ಎಲ್ಲವೂ ಅನ್ನೋದು ಮೂರ್ಖತನದ ಪರಮಾವಧಿಯಾಗಿದ್ದು ಪ್ರಜಾಪ್ರಭುತ್ವದ ಮಾದರಿಯಲ್ಲಿ ಎಲ್ಲರ ಅಭಿಪ್ರಾಯ ಕ್ರೋಡೀಕರಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ ಮಾರ್ಗ ಎಂದರು.

ಸಭೆಯನ್ನು ಉದ್ದÉೀಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ತೆಂಗೇರಿ, ಗ್ರಾಮ ಪಂಚಾಯತ ಚುನಾವಣೆ ಅತ್ಯಂತ ಮಹತ್ವದಾಗಿದ್ದೂ, ಹೊನ್ನಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮ ಪಂಚಾಯತಗಳನ್ನು ಕಾಂಗ್ರೆಸ್ ತನ್ನ ಕೈವಶ ಮಾಡಿಕೊಳ್ಳಲು ಸರ್ವ ಪ್ರಯತ್ನ ಮಾಡಲಾಗುವುದು ಎಂದರು. ಈ ಮಹತ್ವದ ಚುನಾವಣೆ ಮುಂಬರುವ ಜಿಲ್ಲಾ, ತಾಲೂಕಾ ಪಂಚಾಯತಗಳಿಗೆ ಮೆಟ್ಟಿಲಾಗುವುದರಲ್ಲಿ ಯಾವುದೇ ಸಂಶಯವಿಲ್ಲಾ ಎಂದರು. ಗ್ರಾಮ ಪಂಚಾಯತ ಚುನಾವಣೆಯಲ್ಲಿ ಸ್ಪರ್ಧಿಸಲು ಸಚ್ಛಾರಿತ್ರ್ಯವಂತ, ವಿದ್ಯಾವಂತ ಅಭ್ಯರ್ಥಿಗಳನ್ನು ಗುರುತಿಸುವಂತೆ ಸ್ಥಳೀಯ ಗ್ರಾಮ ಪಂಚಾಯತ ಮಟ್ಟದಲ್ಲಿ ಮುಖಂಡರ ಸಮಿತಿ ರಚಿಸಲಾಗಿದೆ ಎಂದರು. ಹಳದೀಪುರ ಜಿಲ್ಲಾ ಪಂಚಾಯತ ಕ್ಷೇತ್ರದಲ್ಲಿ ಜಿ.ಪಂ. ಸದಸ್ಯ ಶಿವಾನಂದ ಹೆಗಡೆ, ವಿನೋದ ನಾಯ್ಕ, ಕರ್ಕಿ, ಮುಗ್ವಾ ಜಿಲ್ಲಾ ಪಂಚಾಯತ ಕ್ಷೇತ್ರದಲ್ಲಿ ಪಕ್ಷದ ಹಿರಿಯ ಮುಖಂಡ ಗಜಾನನ ನಾಯ್ಕ, ಸಾಲ್ಕೋಡ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರವಿ ಶೆಟ್ಟಿ, ಕವಲಕ್ಕಿ, ಇವರನ್ನು ಉಸ್ತುವಾರಿಯಾಗಿ ಹಾಗೂ ಹೊನ್ನಾವರ ಬ್ಲಾಕ್ ಕಾಂಗ್ರೆಸ್ನ ಪರವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಎನ್. ಸುಬ್ರಹ್ಮಣ್ಯ ಅವರನ್ನು ಮೇಲುಸ್ತುವಾರಿಯಾಗಿ ನೇಮಿಸಲಾಗಿದೆ ಎಂದು ಜಗದೀಪ ತೆಂಗೇರಿ ಹೇಳಿದರು.
ಕಾರ್ಯಕರ್ತರ ಪರವಾಗಿ ದಾಮೋದರ ನಾಯ್ಕ, ಹಳದೀಪುರ, ತಿಮ್ಮಪ್ಪ ನಾಯ್ಕ, ಹೊದ್ಕೆ, ಶಫಿ ಮುಲ್ಲಾ ಚಂದಾವರ, ಶರದ್ ನಾಯ್ಕ, ಕಡ್ಲೆ, ಗಜಾನನ ನಾಯ್ಕ, ಸಾಲ್ಕೋಡ, ಸಂದೇಶ ಶೆಟ್ಟಿ ಹೊಸಾಕುಳಿ, ಗಣೇಶ ನಾಯ್ಕ, ಮುಗ್ವಾ, ಬಾಲಚಂದ್ರ ನಾಯ್ಕ ಇನ್ನೂ ಮುಂತಾದವರು ಮಾತನಾಡಿದರು.
ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಎನ್. ಸುಬ್ರಹ್ಮಣ್ಯ, ಮಾಜಿ ಕೆ.ಪಿ.ಸಿ.ಸಿ ಸದಸ್ಯ ವಿನೋದ ನಾಯ್ಕ, ತಾಲೂಕಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಮಾದೇವಿ ನಾಯ್ಕ, ತಾಲೂಕಾ ಇಂಟೆಕ್ ಅಧ್ಯಕ್ಷ ಆಗ್ನೇಲ್ ಡಯಾಸ್, ತಾಲೂಕಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಿಕ್ರಿಯಾ ಶೇಖ್ ಇನ್ನೂ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರವಿ ಶೆಟ್ಟಿ, ಕವಲಕ್ಕಿ ವಂದಿಸಿದರು.

Leave a Comment