• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪೂರ್ವಭಾವಿ ಸಭೆ ತನ್ನಿಂದಲೇ ಎಲ್ಲವೂ ಅನ್ನೋದು ಮೂರ್ಖತನ-ಶಿವಾನಂದ ಹೆಗಡೆ

December 5, 2020 by Sachin Hegde Leave a Comment

ಹೊನ್ನಾವರ : ಗ್ರಾಮ ಪಂಚಾಯತ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳಾಗಲು ಸ್ಥಳೀಯ ಮಟ್ಟದಲ್ಲಿ ಸಹಜವಾಗಿ ಆಕಾಂಕ್ಷಿಗಳಲ್ಲಿ ಪೈಪೋಟಿ ಇರುತ್ತಿದ್ದು, ಪಕ್ಷದ ಒಮ್ಮತದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗುವಂತೆ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಕಿಸಾನ್ ವಿಭಾಗದ ಅಧ್ಯಕ್ಷರು ಹಾಗೂ ಹಳದೀಪುರ ಜಿಲ್ಲಾ ಪಂಚಾಯತ ಸದಸ್ಯರಾದ ಶಿವಾನಂದ ಹೆಗಡೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಮುಂಬರುವ ಗ್ರಾಮ ಪಂಚಾಯತ ಚುನಾವಣೆಯನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ, ಪಟ್ಟಣದ ಸೋಶಿಯಲ್ ಕ್ಲಬ್ ಸಭಾಭವನದಲ್ಲಿ ಏರ್ಪಡಿಸಿದ ಪೂರ್ವಭಾವಿ ಸಭೆಯನ್ನು ಉದ್ದÉೀಶಿಸಿ ಮಾತನಾಡುತ್ತಿದ್ದರು. ತನ್ನಿಂದಲೇ ಎಲ್ಲವೂ ಅನ್ನೋದು ಮೂರ್ಖತನದ ಪರಮಾವಧಿಯಾಗಿದ್ದು ಪ್ರಜಾಪ್ರಭುತ್ವದ ಮಾದರಿಯಲ್ಲಿ ಎಲ್ಲರ ಅಭಿಪ್ರಾಯ ಕ್ರೋಡೀಕರಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ ಮಾರ್ಗ ಎಂದರು.

IMG 20201205 122519
 ಸಭೆಯನ್ನು ಉದ್ದÉೀಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ತೆಂಗೇರಿ, ಗ್ರಾಮ ಪಂಚಾಯತ ಚುನಾವಣೆ ಅತ್ಯಂತ ಮಹತ್ವದಾಗಿದ್ದೂ, ಹೊನ್ನಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮ ಪಂಚಾಯತಗಳನ್ನು ಕಾಂಗ್ರೆಸ್ ತನ್ನ ಕೈವಶ ಮಾಡಿಕೊಳ್ಳಲು ಸರ್ವ ಪ್ರಯತ್ನ ಮಾಡಲಾಗುವುದು ಎಂದರು. ಈ ಮಹತ್ವದ ಚುನಾವಣೆ ಮುಂಬರುವ ಜಿಲ್ಲಾ, ತಾಲೂಕಾ ಪಂಚಾಯತಗಳಿಗೆ ಮೆಟ್ಟಿಲಾಗುವುದರಲ್ಲಿ ಯಾವುದೇ ಸಂಶಯವಿಲ್ಲಾ ಎಂದರು.  ಗ್ರಾಮ ಪಂಚಾಯತ ಚುನಾವಣೆಯಲ್ಲಿ ಸ್ಪರ್ಧಿಸಲು ಸಚ್ಛಾರಿತ್ರ್ಯವಂತ, ವಿದ್ಯಾವಂತ ಅಭ್ಯರ್ಥಿಗಳನ್ನು ಗುರುತಿಸುವಂತೆ ಸ್ಥಳೀಯ ಗ್ರಾಮ ಪಂಚಾಯತ ಮಟ್ಟದಲ್ಲಿ ಮುಖಂಡರ ಸಮಿತಿ ರಚಿಸಲಾಗಿದೆ ಎಂದರು.   ಹಳದೀಪುರ ಜಿಲ್ಲಾ ಪಂಚಾಯತ ಕ್ಷೇತ್ರದಲ್ಲಿ ಜಿ.ಪಂ. ಸದಸ್ಯ ಶಿವಾನಂದ ಹೆಗಡೆ, ವಿನೋದ ನಾಯ್ಕ, ಕರ್ಕಿ, ಮುಗ್ವಾ ಜಿಲ್ಲಾ ಪಂಚಾಯತ ಕ್ಷೇತ್ರದಲ್ಲಿ ಪಕ್ಷದ ಹಿರಿಯ ಮುಖಂಡ ಗಜಾನನ ನಾಯ್ಕ, ಸಾಲ್ಕೋಡ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರವಿ ಶೆಟ್ಟಿ, ಕವಲಕ್ಕಿ, ಇವರನ್ನು ಉಸ್ತುವಾರಿಯಾಗಿ ಹಾಗೂ ಹೊನ್ನಾವರ ಬ್ಲಾಕ್ ಕಾಂಗ್ರೆಸ್‍ನ ಪರವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಎನ್. ಸುಬ್ರಹ್ಮಣ್ಯ ಅವರನ್ನು ಮೇಲುಸ್ತುವಾರಿಯಾಗಿ ನೇಮಿಸಲಾಗಿದೆ ಎಂದು ಜಗದೀಪ ತೆಂಗೇರಿ ಹೇಳಿದರು.  

ಕಾರ್ಯಕರ್ತರ ಪರವಾಗಿ ದಾಮೋದರ ನಾಯ್ಕ, ಹಳದೀಪುರ, ತಿಮ್ಮಪ್ಪ ನಾಯ್ಕ, ಹೊದ್ಕೆ, ಶಫಿ ಮುಲ್ಲಾ ಚಂದಾವರ, ಶರದ್ ನಾಯ್ಕ, ಕಡ್ಲೆ, ಗಜಾನನ ನಾಯ್ಕ, ಸಾಲ್ಕೋಡ, ಸಂದೇಶ ಶೆಟ್ಟಿ ಹೊಸಾಕುಳಿ, ಗಣೇಶ ನಾಯ್ಕ, ಮುಗ್ವಾ, ಬಾಲಚಂದ್ರ ನಾಯ್ಕ ಇನ್ನೂ ಮುಂತಾದವರು ಮಾತನಾಡಿದರು.  

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಎನ್. ಸುಬ್ರಹ್ಮಣ್ಯ, ಮಾಜಿ ಕೆ.ಪಿ.ಸಿ.ಸಿ ಸದಸ್ಯ ವಿನೋದ ನಾಯ್ಕ, ತಾಲೂಕಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಮಾದೇವಿ ನಾಯ್ಕ, ತಾಲೂಕಾ ಇಂಟೆಕ್ ಅಧ್ಯಕ್ಷ ಆಗ್ನೇಲ್ ಡಯಾಸ್, ತಾಲೂಕಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಿಕ್ರಿಯಾ ಶೇಖ್ ಇನ್ನೂ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.  ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರವಿ ಶೆಟ್ಟಿ, ಕವಲಕ್ಕಿ ವಂದಿಸಿದರು.  
IMG 20201205 122039

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News, Other Tagged With: ಆಕಾಂಕ್ಷಿಗಳಲ್ಲಿ ಪೈಪೋಟಿ, ಇವರನ್ನು ಉಸ್ತುವಾರಿ, ಕವಲಕ್ಕಿ, ಕಾಂಗ್ರೆಸ್ ಕಿಸಾನ್ ವಿಭಾಗದ ಅಧ್ಯಕ್ಷರು, ಕಾಂಗ್ರೆಸ್ ತನ್ನ ಕೈವಶ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರವಿ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಕಿಸಾನ್ ವಿಭಾಗ, ತಾಲೂಕಾ ಪಂಚಾಯತ, ಪಂಚಾಯತ ಕ್ಷೇತ್ರದಲ್ಲಿ ಪಕ್ಷದ ಹಿರಿಯ ಮುಖಂಡ ಗಜಾನನ ನಾಯ್ಕ, ಪಂಚಾಯತ ಚುನಾವಣೆ, ಪಟ್ಟಣದ ಸೋಶಿಯಲ್ ಕ್ಲಬ್ ಸಭಾಭವನ, ಪ್ರಜಾಪ್ರಭುತ್ವದ ಮಾದರಿ, ಮಹತ್ವದ ಚುನಾವಣೆ ಮುಂಬರುವ ಜಿಲ್ಲಾ, ವಿದ್ಯಾವಂತ ಅಭ್ಯರ್ಥಿ, ಸಾಲ್ಕೋಡ, ಸ್ಪರ್ಧಿಸಲು ಸಚ್ಛಾರಿತ್ರ್ಯವಂತ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,062 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...