ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಭಾರತದಲ್ಲಿ ಚಿರತೆಗಳ ಸಂಖ್ಯೆ ಹೆಚ್ಚಳಕ್ಕೆ ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ ಮತ್ತು ಪ್ರಾಣಿಗಳ ಸಂರಕ್ಷಣೆ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ “ಇದು ಶುಭ ಸುದ್ದಿ..!
ಸಿಂಹಗಳು ಮತ್ತು ಹುಲಿಗಳ ನಂತರ, ಇದೀಗ ಚಿರತೆಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ.
ವನ್ಯ ಪ್ರಾಣಿಗಳ ಸಂರಕ್ಷಣೆ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವ ಎಲ್ಲರಿಗೂ ಅಭಿನಂದನೆಗಳು. ನಾವು ಈ ಪ್ರಯತ್ನಗಳನ್ನು ಮುಂದುವರಿಸಿ, ನಮ್ಮ ಪ್ರಾಣಿಗಳು ಸುರಕ್ಷಿತ ಆವಾಸಸ್ಥಾನಗಳಲ್ಲಿವೆ ಎಂಬುದನ್ನು ಖಾತ್ರಿಪಡಿಸಬೇಕಿದೆ.’’ ಎಂದು ಹೇಳಿದ್ದಾರೆ.
Leave a Comment