ಭಟ್ಕಳ: ನೂರ್ ಸ್ಪೋಟ್ರ್ಸ ಸೆಂಟರ್ ವತಿಯಿಂದ ನೂರ್ ಪ್ರಾಥಮಿಕ ಶಾಲಾ ಆವರಣದಲ್ಲಿ ಶಿಕ್ಷಣ ಪ್ರೇಮಿ, ಅಂಜುಮನ್ ಶಿಕ್ಷಣ ಸಂಸ್ಥೆಗಳ ಮಾಜಿ ಅಧ್ಯಕ್ಷ ದಿ.ಎಂ.ಎ.ಗನಿ ಸ್ಮರಣಾರ್ಥ ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ ಮತ್ತು ಧಾರ್ಮಿಕ ಶಿಕ್ಷಣದಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಶಸ್ತಿ ಪ್ರದಾನ ಸಮಾರಂಭ ರಾತ್ರಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಉಪಸ್ಥಿತರಿದ್ದ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮುಝಮ್ಮಿಲ್ ಕಾಝಿಯಾ ಮಾತನಾಡಿ, ಸಮುದಾಯದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಲ್ಲಿ ಸಾಧನೆ ಮಾಡಬೇಕು, ಯುಪಿಎಸ್ಸಿ, ಕೆ.ಪಿ.ಎಸ್ಸಿ ಪರೀಕ್ಷೆಗಳನ್ನು ಎದುರಿಸುವ ಸಾಮಥ್ರ್ಯ ಬೆಳೆಸಿಕೊಳ್ಳಬೇಕು. ಇದೇ ಕಾರಣಕ್ಕಾಗಿ ಅಂಜುಮನ್ ಸಂಸ್ಥೆಯು ಅಂಜುಮನ್ ಸೆಂಟರ್ ಆಫ್ ಎಕ್ಸಲೆನ್ಸ್ ಕೇಂದ್ರವನ್ನು ಹುಟ್ಟುಹಾಕಿದ್ದು ಮುಂದಿನ ವರ್ಷದಿಂದ ಐಎಎಸ್,ಐಪಿಎಸ್ ಮತ್ತಿತರ ಉನ್ನತ ಹುದ್ದೆಗಳಿಗೆ ವಿದ್ಯಾರ್ಥಿಗಳು ಧೈರ್ಯದಿಂದ ಪರೀಕ್ಷೆಗಳನ್ನು ಎದುರಿಸುವಂತಾಗಲು ಕೋಚಿಂಗ್ ಸೆಂಟರ್ ನಿರ್ಮಾಣ ಮಾಡಲಾಗುವುದು ಎಂದರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಅವರಿಗೆ ವಸತಿ ಸೌಲಭ್ಯವನ್ನು ಕಲ್ಪಿಸುವುದರ ಮೂಲಕ ಉತ್ತಮ ವಾತವರಣದಲ್ಲಿ ತರಬೇತಿಯನ್ನು ನೀಡಲಾಗುವುದು ಎಂದರು.ನೂರ್ ಸ್ಪೋಟ್ರ್ಸ ಸೆಂಟರ್ ಅಧ್ಯಕ್ಷ ಅಸಿಫ್ ದಾಮೂದಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಇದೇ ಸಂದರ್ಭದಲ್ಲಿ ಅಂಜುಮನ್ ಸಂಸ್ಥೆಯ ಮಾಜಿ ಉಪಾಧ್ಯಕ್ಷ ಮತ್ತು ತಂಝೀಮ್ ಸಂಸ್ಥೆಯ ಮಾಜಿ ಅಧ್ಯಕ್ಷ ಡಿ.ಎಚ್.ಶಬ್ಬರ್ ರನ್ನು ಸನ್ಮಾನಿಸಿ ಗೌರವಿಸಲಾಯಿತು.ಉಬೈದುಲ್ಲಾ ರುಕ್ನುದ್ದೀನ್ ರ ಕುರಾನ್ ಪಠಣದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ನೌಫಿಲ್ ದಾಮೂದಿ ಮತ್ತು ಮುಹಮ್ಮದ್ ಮುಆಝ್ ದಾಮ್ದಾ ಕಾರ್ಯಕ್ರಮ ನಿರೂಪಿಸಿದರು. ಸಮಾರಂಭದ ಸಂಚಾಲಕ ಖಮರ್ ಸಾದಾ ಸ್ವಾಗತಿಸಿದರು.ಮರ್ಕಝಿ ಖಲಿಫಾ ಜಮಾಅತುಲ್ ಮುಸ್ಲಿಮೀನ್ ಪ್ರಧಾನ ಖಾಜಿ ಮೌಲಾನ ಕ್ವಾಜಾ ಮುಈನುದ್ದೀನ್ ಅಕ್ರಮಿ ಮದನಿ ನದ್ವಿ, ಮೌಲಾನ ಅಬ್ದುಲ್ ಅಲೀಂ ಖಾಜಿಯಾ ನದ್ವಿ, ಮೌಲಾನ ಮುಹಮ್ಮದ್ ಇಲಿಯಾಸ್ ಜಾಕ್ಟಿ ನದ್ವಿ, ಮೌಲಾನ ಅಬ್ದುಲ್ ಅಲೀಮ್ ಖಾಸ್ಮಿ, ಮೊಹತೆಶಮ್ ಅಬ್ದುಲ್ ರಹ್ಮಾನ್ ಜಾನ್, ತಂಝೀಮ್ ಅಧ್ಯಕ್ಷ ಎಸ್.ಎಂ.ಸೈಯ್ಯದ್ ಪರ್ವೇಝ್ ಮತ್ತಿತರರು ಶಿಕ್ಷಣದ ಮಹತ್ವದ ಕುರಿತಂತೆ ಮಾತನಾಡಿದರು.
Leave a Comment