
ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಪ್ರಧಾನಮಂತ್ರಿ ಕಿಸಾನ್ ಫಲಾನುಭವಿಗಳಿಗೆ ರಿಯಾಯಿತಿ ದರದಲ್ಲಿ ಸಾಲ ಒದಗಿಸಲು ವಿಶೇಷ ಅಭಿಯಾನವನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಆಂದೋಲನದಲ್ಲಿ ಪಶುಸಂಗೋಪನೆ ಮತ್ತು ಹೈನುಗಾರಿಕೆಯಲ್ಲಿ ತೊಡಗಿರುವ ರೈತರನ್ನು ಸೇರಿಸಲಾಗಿದೆ. ಇದರಿಂದಾಗಿ ರೈತರು ರಿಯಾಯಿತಿ ಬಡ್ಡಿ ದರದಲ್ಲಿ ಸಾಂಸ್ಥಿಕ ಸಾಲಗಳನ್ನು ಪಡೆಯಲು ಸಾಧ್ಯವಾಗಲಿದೆ. 2.5 ಕೋಟಿ ರೈತರು ಇದರ ವ್ಯಾಪ್ತಿಗೆ ಒಳಪಡಲಿದ್ದು, 2 ಲಕ್ಷ ಕೋಟಿ ರೂ.ಗಳ ವರೆಗೆ ಸಾಲದ ಪ್ರಯೋಜನವನ್ನು ಪಡೆಯಬಹುದಾಗಿದೆ. ಈವರೆಗೆ ಹೈನುಗಾರಿಕೆ ತೊಡಗಿರುವ ರೈತರಿಂದ 51.23 ಲಕ್ಷ ಅರ್ಜಿಗಳನ್ನು ಹಾಲು ಘಟಕಗಳನ್ನು ಸಂಗ್ರಹಿಸಿವೆ ಮತ್ತು 41.40 ಲಕ್ಷ ಅರ್ಜಿಗಳನ್ನು ಬ್ಯಾಂಕುಗಳಿಗೆ ವರ್ಗಾಯಿಸಿವೆ.
Leave a Comment