ಭಟ್ಕಳ: ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊರ್ವರ ಮೇಲೆ ಮಂಗವೊಂದು ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಟ್ಟಣದ ವಿ.ಟಿ.ರೋಡ ವಿವಾಸಿ ಸರೋಜಿನಿ ಶೇಟ್ ಗಂಭೀರವಾಗಿ ಗಾಯಗೊಂಡ ಮಹಿಳೆ. ಇವರು ಮನೆಯ ಪಕ್ಕದ ಜಂಬೂರಮಠದ ಬಳಿ ನಡೆದುಕೊಂಡು ಹೋಗುತ್ತಿದ್ದರು. ಏಕಾಏಕಿ ಮಂಗ ದಾಳಿ ನಡೆಸಿದೆ. ಪರಿಣಾಮ ಮಹಿಳೆಯ ರಕ್ತನಾಳಕ್ಕೆ ಹಾನಿಯಾಗಿದ್ದು ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಭಟ್ಕಳ ಪಟ್ಟಣದ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ.
Leave a Comment