ಹೊನ್ನಾವರ : ನಿನ್ನೆ ಬೆಂಗಳೂರಿನ ಸದಾಶಿವ ನಗರದಲ್ಲಿರುವ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ನಿವಾಸಕ್ಕೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಭೇಟಿ ನೀಡಿ ಅಧ್ಯಕ್ಷರೊಂದಿಗೆ ಪಕ್ಷದ ಸಂಘಟನೆಯ ಕುರಿತಂತೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಜಾಲಿ ಪಟ್ಟಣ ಪಂಚಾಯತನ ಮಾಜಿ ಅಧ್ಯಕ್ಷ ಅಬ್ದುಲ್ ರಹೀಮ್ ಶೇಖ್, ಭಟ್ಕಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸಂತೋಷ ನಾಯ್ಕ, ಜಿಲ್ಲಾ ಕಾಂಗ್ರೇಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಅಬ್ದುಲ್ ಮಜಿದ ಶೇಖ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
Leave a Comment