ಹೊನ್ನಾವರ: ತಾಲೂಕು ಆಸ್ಪತ್ರೆಯ ಸಿಬ್ಬಂಧಿಗಳು ಕಾರವಾರದಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿವಿಧ ವಿಭಾಗಗಳಲ್ಲಿ ಐದಕ್ಕೂ ಹೆಚ್ಚು ಬಹುಮಾನ ಪಡೆಯುವದರ ಮೂಲಕ ಗಮನ ಸೆಳೆದಿದ್ದಾರೆ.

ಬ್ಯಾಡ್ಮಿಂಟನ್ ವಿಭಾಗದಲ್ಲಿ ಡಾ|| ಅನುರಾಧ ಮತ್ತು ಮತ್ತು ಡಾ||ವೈಶಾಲಿ ನಾಯ್ಕ, ರನ್ನಿಂಗ್‌ನಲ್ಲಿ ಮಹಾಲಕ್ಷಿö್ಮÃ, ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ. ಕ್ರಿಕೆಟ್‌ನಲ್ಲಿ ನಾಗರಾಜ ನಾಯ್ಕ ಮತ್ತು ಬಾಲ್ ಬ್ಯಾಡ್ಮಿಂಟನ್‌ನಲ್ಲಿ ವೆಂಕಟೇಶ ಜಾಡಮಾಲಿ ಬಹುಮಾನ ಪಡೆದಿದ್ದಾರೆ. ಕೆಲಸದ ಒತ್ತಡದ ನಡುವೆಯೂ ಕ್ರೀಡಾಕೂಟದಲ್ಲಿ ಭಾಗವಹಿಸಿ ಬಹುಮಾನ ಪಡೆದಿರುವದಕ್ಕೆ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾದ ಡಾ|| ರಾಜೇಶ್ ಕಿಣಿ, ಸೇರಿದಂತೆ ವೈದ್ಯರು ಮತ್ತು ಸಿಬ್ಬಂಧಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
Leave a Comment