• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಿವಿಧ ಇಲಾಖೆ ಅಧಿಕಾರಿಗಳಿಂದ ಬಾಲ ಕಾರ್ಮಿಕ ಪತ್ತೆ ಕಾರ್ಯಾಚರಣೆ

February 21, 2021 by Vishwanath Shetty Leave a Comment

ಹೊನ್ನಾವರ: ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಜಿಲ್ಲಾಧಿಕಾರಿಗಳು, ಜಿಲ್ಲಾ ಕಾರ್ಮಿಕ ಇಲಾಖೆ,ತಹಶಿಲ್ದಾರ  ನಿರ್ದೇಶನದಂತೆ ಹೊನ್ನಾವರ ತಾಲೂಕಿನ  ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆ ಅಧಿಕಾರಿಗಳಿಂದ ಪಟ್ಟಣದಲ್ಲಿ  ಹಾಗೂ ತಾಲೂಕಿನ ವಿವಿಧ ಭಾಗಗಳಲ್ಲಿ ಶನಿವಾರ ಬಾಲ ಕಾರ್ಮಿಕ ಪತ್ತೆ ಕಾರ್ಯಾಚರಣೆ ಹಾಗೂ ಜನಜಾಗೃತಿ ಕಾರ್ಯಕ್ರಮ ನಡೆಯಿತು.

IMG 20210220 110537 1


ಬಾಲಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಳ್ಳುವುದು ಅಪರಾಧ ಎನ್ನುವುದರ ಕುರಿತು ಅಧಿಕಾರಿಗಳು ಜಾಗೃತಿ ಮೂಡಿಸಿದರು. ಪೊಲೀಸ್ ಇಲಾಖೆ,  ಸಿಡಿಪಿಯು, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ, ಆರೋಗ್ಯ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ, ಸಮಾಜ ಕಲ್ಯಾಣ ಇಲಾಖಾ ಅಧಿಕಾರಿಗಳು,ಬಾಲಕಾರ್ಮಿಕ ಯೋಜನಾ ನಿರ್ದೇಶಕರು ಕಾರವಾರ ಅವರನ್ನು ಒಳಗೊಂಡ ವಿವಿಧ ಇಲಾಖೆಯ ನಿರೀಕ್ಷಕರು ಜಂಟಿಯಾಗಿ ಹೊನ್ನಾವರದ 20 ಕಡೆಗಳಲ್ಲಿ ಅಂಗಡಿ, ವಾಣಿಜ್ಯ ಸಂಸ್ಥೆಗಳು, ಗ್ಯಾರೇಜ್ ಗ್ಯಾರೇಜ್ ಹೋಟೆಲ್ , ಬಾರ್ ಮತ್ತು ರೆಸ್ಟೋರೆಂಟ್ ,ಬಟ್ಟೆ ಅಂಗಡಿಗಳ ಮೇಲೆ ದಾಳಿ ನಡೆಸಲಾಯಿತು. ಪಟ್ಟಣದ ನ್ಯೂ ಬಾಂಬೆ ಬಜಾರ ಮಳಿಗೆಯಲ್ಲಿ ಅಂದಾಜು ಹದಿನೇಳು ವರ್ಷದ ಬಾಲಕ ಕೆಲಸ ಮಾಡುತ್ತಿರುವುದು ಅಧಿಕಾರಿಗಳ ಗಮನಕ್ಕೆ  ಕಂಡುಬಂದಿದೆ. ಮಾಲೀಕರಿಗೆ ಬಾಲಕನ ವಯಸ್ಸಿನ ಪ್ರಮಾಣಪತ್ರ ಇತರೆ ದಾಖಲೆಗಳನ್ನು ಕಾರ್ಮಿಕ ನಿರೀಕ್ಷಕರ ಇಲಾಖೆಗೆ ಸಲ್ಲಿಸುವಂತೆ ಕಾರ್ಮಿಕ ನಿರೀಕ್ಷಕರು ನೋಟಿಸ್ ನೀಡಿದ್ದು ಬಾಲಕನ ಹೇಳಿಕೆಯನ್ನು ಸಹ ಪಡೆದಿದ್ದಾರೆ. ಅದರಂತೆ ಅರೆಂಗಡಿ ಸಮೀಪದ ಹೊದಿಕರಶಿರೂರು ಎಂಬ ಗ್ರಾಮದಲ್ಲಿನ ಕ್ರಶರ್ ಘಟಕದ ಮೇಲೆ ದಾಳಿ ಮಾಡಿದ್ದ ವೇಳೆ  ಘಟಕ  ಸ್ಥಗಿತಗೊಳಿಸಿದ್ದರು ಹಾಗೂ ಇನ್ನಾವುದೇ ವಿವಿಧ  ಸಂಸ್ಥೆಗಳಲ್ಲಿ ಬಾಲಕಾರ್ಮಿಕ ಅಥವಾ ಕಿಶೋರ ಕಾರ್ಮಿಕ ಕಂಡುಬಂದಿಲ್ಲ. ಈ  ಸಂದರ್ಭದಲ್ಲಿ ಜಂಟಿಯಾಗಿ ಹಠಾತ್ ದಾಳಿ ತಂಡಕ್ಕೆ ರಸ್ತೆಯಲ್ಲಿ ಹೊರ ರಾಜ್ಯದಿಂದ ವಲಸೆ ಬಂದಿರುವ ಕಾರ್ಮಿಕ ಮಕ್ಕಳು ಭಿಕ್ಷಾಟನೆಯಲ್ಲಿ ಇರುವುದು ಕಂಡುಬಂದಿದೆ. ಅದೇ ಈ ಬಾಲಕರ ಪೋಷಕರನ್ನು ಸ್ಥಳಕ್ಕೆ ಕರೆಯಿಸಿ ಎಚ್ಚರಿಕೆ ನೀಡಿ ಅವರ ಜೊತೆ ಕಳುಹಿಸಿಕೊಡಲಾಯಿತು. ಬಾಲಕಾರ್ಮಿಕ,ಕಿಶೋರ ಕಾರ್ಮಿಕ ಬಗ್ಗೆ ಜಾಗೃತಿ ಭಿತ್ತಿ ಚಿತ್ರವನ್ನು ಅಂಟಿಸಲಾಯಿತು.ಈ ಕುರಿತು ಹೊನ್ನಾವರ ಕಾರ್ಮಿಕ ನಿರಿಕ್ಷಕಿ ಕಾವೇರಿ. ಟಿ ಮಾತನಾಡಿ ಉತ್ತರ ಕನ್ನಡ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ವಲಯವನ್ನಾಗಿ ಮಾಡಬೇಕು ಎನ್ನುವುದು ಇದರ ಉದ್ದೇಶವಾಗಿದೆ.ಅನಕ್ಷರತೆ ಮತ್ತು ಆರ್ಥಿಕ ಸಮಸ್ಯೆಯೇ ಬಾಲಕಾರ್ಮಿಕ ಪದ್ಧತಿಗೆ ಮೂಲ ಕಾರಣವಾಗಿದ್ದು, ಸರಕಾರ ಒದಗಿಸಿರುವ 10 ಹಲವು ಸೌಲಭ್ಯಗಳನ್ನು ವಿವಿಧ ಇಲಾಖೆಗಳು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ಮೂಲಕ ಮಕ್ಕಳ ಸರ್ವಾಂಗೀಣ ವಿಕಸನಕ್ಕೆ ಮಾರಕವಾಗಿರುವ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ  ಸಹಕರಿಸಿ ಎಂದು  ತಿಳಿಸಿದರು.ಈ ಸಂಧರ್ಭದಲ್ಲಿ ಪ.ಪಂ ಮುಖ್ಯಾಧಿಕಾರಿ ನೀಲಕಂಠ ಮೇಸ್ತ,ಆರೋಗ್ಯ ನೀರಿಕ್ಷಕ ಸುನೀಲ್ ಗಾವಡೆ, ಜಿಲ್ಲಾ ಬಾಲ ಕಾರ್ಮಿಕ ಯೋಜನೆ ಸೊಸೈಟಿಯ ಯೋಜನಾ ನಿರ್ದೇಶಕ ಸಂದೇಶ್ ಗಾಂವ್ಕರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ರಾಜು ನಾಯ್ಕ, ಶಿಕ್ಷಣ ಇಲಾಖೆಯ ಪ್ರಮೋದ್ ನಾಯ್ಕ, ಪೊಲೀಸ್ ಇಲಾಖೆಯ ಶಿವರಾಂ ದೇಸಾಯಿ, ಕಾರ್ಮಿಕ ಇಲಾಖೆಯ ಆನಂದ ದಾಳಿ ವೇಳೆ ಪಾಲ್ಗೊಂಡಿದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Haliyal News Tagged With: ಬಾಲಕಾರ್ಮಿಕ ಯೋಜನಾ ನಿರ್ದೇಶಕರು

Explore More:

About Vishwanath Shetty

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,118 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...