ಹಳಿಯಾಳ:- ನಮಗೆ ನಿಗಮ ಮಂಡಳಿ, ಪ್ರಾಧಿಕಾರ, ಅನುದಾನ ಬೇಡ, ಮುಂದಿನ ನಮ್ಮ ಮಕ್ಕಳ ಭವಿಷ್ಯಕ್ಕಾಗಿ ಹಾಗೂ ಸಮಾಜದ ಅಭಿವೃದ್ಧಿಗೆ 2 ಎ ಮೀಸಲಾತಿ ಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಪೆÇೀಷಕರು ಹಾಗೂ ಪಂಚಮಸಾಲಿ ಸಮುದಾಯದ ಯುವ ಮುಖಂಡ ಆಕಾಶ ಉಪ್ಪಿನ ಹೇಳಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ವೀರಶೈವ ಲಿಂಗಾಯತ ರಾಷ್ಟ್ರೀಯ ವೇದಿಕೆ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯು ಆಗಿರುವ ಆಕಾಶ ಅವರು ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದಿರುವ, ಕಡುಬಡವರಾಗಿರುವ ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗಲೇಬೇಕು ಎಂದು ಆಗ್ರಹಿಸಿದರು.
ಈ ಹಿಂದೆ ದೇವರಾಜ ಅರಸು ಹಾಗೂ ದೇವೇಗೌಡರು ತಮ್ಮ ಸಮಾಜಕ್ಕೆ ನ್ಯಾಯ ಕೊಟ್ಟಿದ್ದಾರೆ ಅದೇ ರೀತಿಯಾಗಿ ನಮ್ಮ ಪಂಚಮಸಾಲಿ ಸಮಾಜಕ್ಕೆ ಬಿ.ಎಸ್.ಯಡಿಯೂರಪ್ಪನವರು ಮೀಸಲಾತಿ ಕೊಡುವ ವಿಶ್ವಾಸ ನಮಗೆ ಇದೆ.

ಬೆಂಗಳೂರಿನಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸಮಾವೇಶ ನಡೆಸಿದರೂ ಫಲ ಸಿಗಲಿಲ್ಲ ಹೀಗಾಗಿ ಇಂದಿನಿಂದ ಮಾ.4 ರವರೆಗೆ ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಧರಣಿ ಸತ್ಯಾಗ್ರಹ ಆರಂಭವಾಗಿದ್ದು ಮೀಸಲಾತಿ ಕೊಡುವವರಿಗೆ ನಮ್ಮ ಈ ಹೋರಾಟ ನಿಲ್ಲುವುದಿಲ್ಲ ಎಂದು ಉಪ್ಪಿನ ಸ್ಪಷ್ಟಪಡಿಸಿದರು.

ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ನಿನ್ನೆ ಅಸ್ತಿತ್ವಕ್ಕೆ ಬಂದಿದ್ದು, ಅರಮನೆ ಮೈದಾನದ ಸಮಾವೇಶದಲ್ಲಿ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ವಿಜಯಾನಂದ ಕಾಶಪ್ಪನವರ ಅವರ ಹೆಸರನ್ನು ಜಯಮೃತ್ಯುಂಜಯ ಶ್ರೀಗಳು ಘೋಷಿಸಿದ್ದು ಅವರ ನೇತೃತ್ವದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಆಕಾಶ ಉಪ್ಪಿನ ತಿಳಿಸಿದರು.

Leave a Comment