ಹೊನ್ನಾವರ : ಇಲ್ಲಿಯ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗ ವಿಭಾಗದ ನೂತನ ಅಧ್ಯಕ್ಷರಾಗಿ ತಾಲೂಕಿನ ಮಲ್ಲಾಪುರ ಗ್ರಾಮದ ಕುಪ್ಪು ಹನುಮಂತ ಗೌಡ ಇವರನ್ನು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿಯವರ ಸೂಚನೆಯ ಮೇರೆಗೆ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷರಾದ ಭೈರವ ಡಿ. ನಾಯ್ಕ ನೇಮಿಸಿ ಆದೇಶ ಹೊರಡಿಸಿದ್ದಾರೆ.

ಇಂದು ಶಿರಸಿಯ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ನೇಮಕಾತಿ ಆದೇಶ ಪತ್ರವನ್ನು ಕೆ.ಚ್.ಗೌಡ ಅವರಿಗೆ ನೀಡಿ ತಕ್ಷಣ ಪಕ್ಷದ ಸಂಘಟನೆಯನ್ನು ಚುರುಕುಗೊಳಿಸುವಂತೆ ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದರು. ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಮಂಜುನಾಥ ಗೌಡ ಮತ್ತು ಪಟ್ಟಣದ ರಾಯಲ್‍ಕೇರಿಯ ಗಜಾನನ ರಾಮಕೃಷ್ಣ ನಾಯ್ಕ ಇವರನ್ನು ಜಿಲ್ಲಾ ಸಮಿತಿಗೆ ನೇಮಿಸಿ ಆದೇಶಿಸಲಾಗಿದೆ. ಈ ಸಂದರ್ಭದಲ್ಲಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಚ್. ಎಂ. ನಾಯ್ಕ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರವಿ ಶೆಟ್ಟಿ, ಕವಲಕ್ಕಿ, ಸುದರ್ಶನ ಹೊನ್ನಾವರ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Leave a Comment