ಹೊನ್ನಾವರ: ಬಡ ಹಾಗೂ ಮಧ್ಯಮ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಸತಿ ಶಾಲೆ ಸಹಕಾರಿಯಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಶಾಸಕ ಸುನೀಲ ನಾಯ್ಕ ಸಲಹೆ ನೀಡಿದರು.

ತಾಲೂಕಿನ ಮಾವಿನಕುರ್ವಾ ಹೋಬಳಿಯ ಹೆರಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 20 ಕೋಟಿ ವೆಚ್ಚದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿ ಶಂಕು ಸ್ಥಾಪನೆಯ ಬಳಿಕ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಬಹುತೇಕ ಎಲ್ಲಾ ಕಡೆಗಳಲ್ಲಿಯೂ ರಸ್ತೆ, ಕುಡಿಯುವ ನೀರು, ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ಎಲ್ಲಿಯೂ ತೊಂದರೆ ಆಗಂದಂತೆ ಜನರ ಸಮಸ್ಯೆಗೆ ಸದಾ ಸ್ಪಂದಿಸುವ ಕೆಲಸ ಮಾಡಿದ್ದೇನೆ. 20 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಸತಿ ಶಾಲೆಗೆ ಹೆಚ್ಚಿನ ಅನುದಾನ ತರುವಲ್ಲಿ ಶತ ಪ್ರಯತ್ನ ಮಾಡಿದ್ದೇನೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಸರ್ಕಾರದ ಸೌಲಭ್ಯವನ್ನು ನೇರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ವಸತಿ ಶಾಲೆಗೆ ಮೊದಲ ಹಂತದಲ್ಲಿ 5 ಎಕರೆ ಜಾಗದವನ್ನು ಮಂಜೂರು ಮಾಡುವ ಮೂಲಕ ಜಿಲ್ಲೆ ಪ್ರಥಮವಾಗಿ ಡಾ.ಬಿ.ಆರ್.ಅಂಬೇಡ್ಕರ್ ವಸತಿ ನಿಲಯ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಇದರ ಸೌಲಭ್ಯವನ್ನು ಸ್ಥಳೀಯರು ಪಡೆದುಕೊಳ್ಳಬೇಕು ಮತ್ತು ಎಲ್ಲರನ್ನೂ ಮುಖ್ಯ ವಾಹಿನಿಗೆ ತರುವ ಪ್ರಯತ್ನ ಮಾಡುತ್ತಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಶಾಸಕ ಸುನೀಲ ನಾಯ್ಕ ಅವರಿಗೆ ಹೆರಂಗಡಿ ಭಾಗದ ಗ್ರಾಪಂ ಸದಸ್ಯರು, ಊರಿನ ಹಿರಿಯರು ಹಾಗೂ ಸಮಾಜ ಪ್ರಮುಖರು ಸನ್ಮಾನಿಸಿ ಗೌರವಿಸಿದರು.
ಈ ಸಂದಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಮೋದ ನಾಯ್ಕ ನಗರಬಸ್ತಿಕೇರಿ ಪಂಚಾಯತ ಅಧ್ಯಕ್ಷ ಮಂಜುನಾಥ ನಾಯ್ಕ,ಉಪಾಧ್ಯಕ್ಷೆ ಭಾರತಿ ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಆರ್.ನಾಯ್ಕ, ಅಳ್ಳಂಕಿ ಕಾಲೇಜಿನ ಪ್ರಾಚಾರ್ಯ ಜಿ.ಎಸ್.ಹೆಗಡೆ, ವ್ಯವಸಾಯ ಸೇವಾ ಸಂಘದ ಅಧ್ಯಕ್ಷ ಜಯಂತ ನಾಯ್ಕ, ಪಂಚಾಯತ ಅಭಿವೃದ್ದಿ ಅಧಿಕಾರಿ ಉದಯ ಬಾಂದೇಕರ್, ಸದಸ್ಯರಾದ ಗಣಪತಿ ನಾಯ್ಕ ಬಿಟಿ, ವಿನಾಯಕ ನಾಯ್ಕ, ರೇಖಾ ನಾಯ್ಕ, ಲೋಕೇಶ ನಾಯ್ಕ, ಮಹೇಶ ನಾಯ್ಕ, ಮೇರಿ ಡಯಾಸ್, ಮಂಗಲಾ ಹಳ್ಳೇರ, ಪ್ರಕಾಶ ನಾಯ್ಕ ಕಾರ್ಯಕರ್ತರು ಹಾಜರಿದ್ದರು.
Leave a Comment