ಹೊನ್ನಾವರ ತಾಲೂಕಿನ ಬಾಳೆಗದ್ದೆಯ ಶ್ರೀ ವೆಂಕಟ್ರಮಣ ದೇವರ ವಾರ್ಷಿಕ ವರ್ಧಂತಿ ಗುರುವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿAದ ನಡೆಯಿತು.
ಬೆಳಿಗ್ಗೆ ದೇವತಾ ಪ್ರಾರ್ಥನೆ, ಧ್ವಜಾರೋಹಣ, ನಿತ್ಯಬಲಿ, ಬ್ರಹ್ಮಕಲಶಪೂಜೆ, ಪ್ರಾಣ ಪ್ರತಿಷ್ಠಾ ಹೋಮ, ೧೦೦೮ ಬ್ರಹ್ಮಕಲಶಾಭಿಷೇಕ, ಪಲ್ಲಕ್ಕಿ ಉತ್ಸವ, ಮಹಾಪೂಜೆ ಧಾರ್ಮಿಕ ಕಾರ್ಯಕ್ರಮಗಳು ವೇ.ಮೂ.ಪುಟ್ಟಭಟ್ಟ, ಅಣಯ್ಯ ಭಟ್ಟ ಇವರ ನೇತ್ರತ್ವದಲ್ಲಿ ಜರುಗಿತು. ಧಾರ್ಮಿಕ ಕಾರ್ಯಕ್ರಮದ ನಂತರ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಕುಮಟಾ ಹೊನ್ನಾವರ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಸೇರಿದಂತೆ ಸಾವಿರಾರು ಸಂಖ್ಯೆಯ ಭಕ್ತರು ಪಾಲ್ಗೊಂಡು ದೇವರ ದರ್ಶನ ಪಡೆದರು.

Leave a Comment