ಹೊನ್ನಾವರ – ತಾಲ್ಲೂಕಿನ ಹಾಡಿನಬಾಳ ಸಮೀಪ ಗುಂಡಿಬೈಲ್ ರಸ್ತೆಯಲ್ಲಿ ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಖ್ಯಾತ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪದ್ಮಶ್ರೀ ಪುರಸ್ಕೃತ ದಿವಂಗತ ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರ ಮಗನಾದ ಸುಬ್ರಹ್ಮಣ್ಯ ತಂದೆಯ ಹಾದಿಯಲ್ಲಿಯೇ ಹೆಜ್ಜೆ ಹಾಕಿ ಕಲಾವಿದರಾಗಿ ಸಾಕಷ್ಟು ಹೆಸರು ಸಂಪಾದಿಸಿದ್ದರು.
ಅಪಘಾತದಲ್ಲಿ ತಲೆಯ ಭಾಗಕ್ಕೆ ತೀವ್ರವಾದ ಗಾಯಗಳಾಗಿದೆ ಎನ್ನಲಾಗಿದ್ದು ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Leave a Comment