ಭಟ್ಕಳ: ಕೋವಿಡ್ ಸಂದರ್ಭದಲ್ಲಿ ಯಾವುದೇ ಫಲಾಫೇಕ್ಷೆ ಇಲ್ಲದೆ ಸ್ವಂತ ಖರ್ಚಿನಲ್ಲಿ ಅವಶ್ಯಕತೆ ಇದ್ದವರಿಗೆ ಊಟೋಪಚಾರ ಸೇರಿ ವಿವಿಧ ರೀತಿಯಲ್ಲಿ ಸಹಕರಿಸಿದ ಮಹಿಳೆಯರ ಕೊಡುಗೆ ಅಪಾರ ಹಾಗೂ ಶ್ಲಾಘನೀಯ ಎಂದು ಸ್ಪಂದನಾ ಸೇವಾ ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ನಾಯ್ಕ ಹೇಳಿದರು.

ಅವರು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೋಗ್ತಿಯಲ್ಲಿರುವ ಸ್ನೇಹ ವಿಶೇಷ ಮಕ್ಕಳ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಸ್ಪಂದನಾ ಸಂಸ್ಥೆ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ತೋರಿದ ಮಹಿಳೆಯರನ್ನು ಗೌರವಿಸಲಾಯಿತು.
ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘದ ಸೇವಾ ಪ್ರತಿನಿಧಿಯಾದ ಕುಮುದಾ ಮಾಸ್ತಪ್ಪ ನಾಯ್ಕ, ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಊಟೋಪಚಾರದ ವ್ಯವಸ್ಥೆ ಮಾಡಿದ ಗೀತಾ ಗೋಪಾಲಕೃಷ್ಣ ಭಟ್, ಮಹಿಳಾ ಮತ್ತು ಮಕ್ಕಳ ಅಬಿವೃದ್ದಿ ಇಲಾಖೆಯ ಮಹಿಳಾ ಮೇಲ್ವಿಚಾರಕಿ ಸುಶೀಲಾ ಮೊಗೇರ, ಸ್ನೇಹ ವಿಶೇಷ ಶಾಲೆಯ ನಿರ್ವಾಹಕಿ ಮಾಲತಿ ಉದ್ಯಾವರ, ಹಾಗೂ ಭಟ್ಕಳ ಪುರಸಭೆಯ ಆರೋಗ್ಯಾಧಿಕಾರಿ ಸುಜಿಯಾ ಸೋಮನ್ ಇವರನ್ನು ಫಲಪುಷ್ಪ ಹಾಗೂ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು.
ಸ್ಪಂದನ ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ನಾಯ್ಕ ತಮ್ಮ ಹುಟ್ಟುಹಬ್ಬವನ್ನು ಭಟ್ಕಳ ತಾಲೂಕಿನ ಕೋಕ್ತಿಯಲ್ಲಿರುವ ವಿಶೇಷ ಶಾಲೆಯ ಮಕ್ಕಳ ಸಮ್ಮುಖದಲ್ಲಿ ಆಚರಿಸಿಕೊಂಡು ಮಕ್ಕಳಿಗೆ ಸಿಹಿ ವಿತರಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಬಿ.ಎಸ್.ಎನ್.ಎಲ್. ಅಧಿಕಾರಿ ಎಂ.ಎಲ್. ನಾಯ್ಕ, ನಾಮಧಾರಿ ಗುರುಮಠ ದೇವಸ್ಥಾನದ ಅಧ್ಯಕ್ಷ ಕೃಷ್ಣ ನಾಯ್ಕ, ಕ್ರೀಯಾಶೀಲ ಗೆಳೆಯರ ಸಂಘದ ಅಧ್ಯಕ್ಷ ಭಾಸ್ಕರ ನಾಯ್ಕ, ಸ್ನೇಹ ಮಕ್ಕಳ ಶಾಲೆಯ ನಿರ್ವಾಹಕಿ ಮಾಲತಿ ಉದ್ಯಾವರ, ರಾಮಕೃಷ್ಣ ನಾಯ್ಕ, ಇದ್ದರು. ಸ್ಪಂದನ ಸಂಸ್ಥೆಯ ಕಾರ್ಯದರ್ಶಿ ಪಾಂಡುರಂಗ ನಾಯ್ಕ, ಶಿಕ್ಷಕ ನಾರಾಯಣ ನಾಯ್ಕ, ಭವಾನಿಶಂಕರ ನಾಯ್ಕ, ಶಿವಾನಂದ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.
Leave a Comment