ಹೊನ್ನಾವರ : ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರÀವರ ಆದೇಶದಂತೆ ಪ್ರತಿ ಪಂಚಾಯತ ಮಟ್ಟದಲ್ಲಿ ಕನಿಷ್ಟ ಮೂವತ್ತು ಸದಸ್ಯರನ್ನೊಳಗೊಂಡ ಪಂಚಾಯತ ಪ್ರಜಾ ಪ್ರತಿನಿಧಿ ಸಮಿತಿಯನ್ನು ರಚಿಸಿ, ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ ಚುನಾವಣೆಗೆ ಪಕ್ಷವನ್ನು ಸನ್ನದ್ಧಗೊಳಿಸಲು ಮಂಗಳವಾರ ದಿ. 16ರ ಮುಂಜಾನೆ 10:30ಕ್ಕೆ ನಗರದ ಸಾಗರ ರೆಸಿಡೆನ್ಸಿ ಸಭಾಭವನದಲ್ಲಿ ಕಾರ್ಯಕರ್ತರ ಸಭೆ ಕರೆಯಲಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ.

ಮಾಜಿ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ, ಪಕ್ಷದ ಹಿರಿಯ ಮುಖಂಡರು, ಜಿಲ್ಲಾ ಕಾಂಗ್ರೆಸ್ ಪಧಾದಿಕಾರಿಗಳು, ಜಿಲ್ಲಾ ಮತ್ತು ತಾಲೂಕು ಪಂಚಾಯತ ಸದಸ್ಯರು, ಗ್ರಾಮ ಪಂಚಾಯತ ಸದಸ್ಯರು, ವಿವಿಧ ಸೆಲ್ಗಳ ಪದಾಧಿಕಾರಿಗಳು, ಬ್ಲಾಕ್ ಮತ್ತು ಜಿಲ್ಲಾ ಕಾಂಗ್ರೆಸ್ ಪಧಾದಿಕಾರಿಗಳು ಭಾಗವಹಿಸುವ ಈ ಸಭೆಯಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೋಳ್ಳುವಂತೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
Leave a Comment