ಹೊನ್ನಾವರ: ತಾಲೂಕಿನ ಸಾಲ್ಕೋಡ್ ಹೊಳೆಗೆ 1 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಸೇತುವೆ ಹಾಗೂ ಕಂ ಬ್ಯಾರೇಜ್ ಕಾಮಗಾರಿಗೆ ಶನಿವಾರ ಶಾಶಕ ದಿನಕರ ಶೆಟ್ಟಿ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ರಜನಿ ನಾಯ್ಕ ನೇತ್ರತ್ವದಲ್ಲಿ ಮುಂದುವರೆದ ಸೇತುವೆ ಹಾಗೂ ರಸ್ತೆ ಕಾಮಗಾರಿಯ ಬಗ್ಗೆ ಮನವಿ ಸಲ್ಲಿಸಿದರು. ಸೇತುವೆ ನಿರ್ಮಾಣವಾದ ಹಿನ್ನೆಲೆಯಲ್ಲಿ ಶಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷೆ ರಜನಿ ನಾಯ್ಕ, ಜಿಲ್ಲಾ ಪಂಚಾಯತ ಸದಸ್ಯೆ ಶ್ರೀಕಲಾ ಶಾಸ್ತ್ರಿ, ಕಡ್ಲೆ ಪಂಚಾಯತ ಅಧ್ಯಕ್ಷ ಗೋವಿಂದ ಗೌಡ ಸದಸ್ಯರಾದ ಬಾಲಚಂದ್ರ ನಾಯ್ಕ, ಲಕ್ಷ್ಮೀ ಮುಕ್ರಿ, ಫಾತ್ರೂನ್ ಮೆಂಡಿಸ್ ನಾಗೇಶ ಗೌಡ ಸೇರಿದಂತೆ ಪಕ್ಷದ ಕಾರ್ಯಕರ್ತರು ಗ್ರಾಮಸ್ಥರು ಹಾಜರಿದ್ದರು.
Leave a Comment