ಹಳಿಯಾಳ:- ಪಟ್ಟಣದ ಸರ್ಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಬಿಜೆಪಿ ಸಾಮಾಜಿಕ ಜಾಲತಾಣ ಸಮಿತಿ ವತಿಯಿಂದ ಆಯೋಜಿಸಿದ್ದ ಕೋವಿಡ್ – 19 ಲಸಿಕಾ ನೊಂದಣಿ ಅಭಿಯಾನ ಕಾರ್ಯಕ್ರಮವನ್ನು ಹಳಿಯಾಳ ಮಾಜಿ ಶಾಸಕ ಸುನೀಲ್ ಹೆಗಡೆ ಚಾಲನೆ ನೀಡಿದರು.

ಅಭಿಯಾನಕ್ಕೆ ಚಾಲನೆ ನೀಡಿದ ಮಾತನಾಡಿದ ಅವರು ಈಗಾಗಲೇ ಕೋವಿಡ್-19 ಎರಡನೇ ಅಲೆ ಆರಂಭವಾಗಿದೆ. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಗಳನ್ನು ಬಳಸಬೇಕು. ಅದೇ ರೀತಿ ಸಾರ್ವಜನಿಕರಿಗೆ ಇದರ ಬಗ್ಗೆ ಅರಿವು ಮೂಡಿಸುವಲ್ಲಿಯೂ ಎಲ್ಲರೂ ಪರಸ್ಪರ ಸಹಕಾರ ನೀಡಬೇಕು ಹಾಗೂ ಕೋವಿಡ್ ಲಸಿಕೆಯನ್ನು ಆದಷ್ಟು ಬೇಗನೆ ಎಲ್ಲರೂ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಬಳಿಕ ಅವರು ಲಸಿಕಾ ಕೇಂದ್ರಕ್ಕೆ ಭೇಟಿ ಲಸಿಕೆ ಪಡೆಯಲು ಬರುತ್ತಿದ್ದ ಜನರಿಗೆ ಕೊವಿಡ್ ಲಸಿಕೆಯ ಕುರಿತು ಮಾಹಿತಿ ನೀಡಿದರು ಅಲ್ಲದೇ ಎಲ್ಲರಿಗೂ ಲಸಿಕೆ ಪಡೆಯುವಂತೆ ಪ್ರೇರೆಪಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಾಲೂಕಾ ವೈದ್ಯಾಧಿಕಾರಿಗಳಾದ ರಮೇಶ್ ಕದಂ, ಮಂಡಲ ಬಿಜೆಪಿ ಅಧ್ಯಕ್ಷರಾದ ಗಣಪತಿ ಕರಂಜೆಕರ, ಜಿಲ್ಲಾ ಓಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಾಜಿ ನರಸಾನಿ, ಪ್ರಧಾನ ಕಾರ್ಯದರ್ಶಿ ಅನಿಲ್ ಮುತ್ನಾಳೆ, ಸಾಮಾಜಿಕ ಜಾಲತಾಣದ ಸಂಚಾಲಕ ಆಕಾಶ ಉಪ್ಪಿನ, ಜಿಲ್ಲಾ ಎಸ.ಎಂ.ಐ.ಟಿ ಕಾರ್ಯಕಾರಿಣಿ ಸದಸ್ಯ ರಾಘವೇಂದ್ರ ಹೆಗಡೆ, ಪುರಸಭೆ ಸದಸ್ಯರಾದ ಉದಯ ಹೂಲಿ, ಸಂತೋμï ಘಟಕಾಂಬಳೆ, ಮುಖಂಡರಾದ ಮಂಜು ಪಂಡಿತ್, ಯಲ್ಲಪ್ಪಾ ಹೊನ್ನೋಜಿ, ಆನಂದ ಕಂಚನಾಳಕರ, ರಾಮಚಂದ್ರ ಸುರೋಜಿ ಇದ್ದರು.
Leave a Comment