ಹೊನ್ನಾವರ – ಎಂ.ಪಿ.ಇ. ಸೊಸೈಟಿಯ ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸುರೇಶ್ ಎಸ್. ಇವರು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕರಾದ ಡಾ. ಜೆ. ಸಣ್ಣಪ್ಪ ಅವರ ಮಾರ್ಗದರ್ಶನದಲ್ಲಿ
“Studies On Background Radiation Levels in Uttara Kannada District”ಶೀರ್ಷಿಕೆಯಲ್ಲಿ ಸಲ್ಲಿಸಿದ ಮಹಾಪ್ರಬಂಧವನ್ನು ಪರೀಕ್ಷಾ ಮಂಡಳಿಯು ಶಿಫಾರಸ್ಸು ಮಾಡಿ ಪಿ.ಎಚ್.ಡಿ. ಪದವಿಯನ್ನು ಪ್ರಧಾನ ಮಾಡಿದೆ. ಆಡಳಿತ ಮಂಡಳಿಯ ಸರ್ವ ಸದಸ್ಯರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಇವರ ಸಾಧನೆಗೆ ಅಭಿನಂದನೆ ಸಲ್ಲಿಸಿರುತ್ತಾರೆ.
Leave a Comment