ಎಂ.ಪಿ.ಇ.ಸೊಸೈಟಿಯ ಎಸ್.ಡಿ.ಎಂ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿನಿ ಕುಮಾರಿ ರಾಜೇಶ್ವರಿ ಮಂಜುನಾಥ್ ನಾಯ್ಕ್ ಕರ್ನಾಟಕ ವಿಶ್ವವಿದ್ಯಾಲಯದಿಂದ ರ‍್ಯಾಂಕ್ ಪಡೆದಿದ್ದಾರೆ.

ಮಹಾವಿದ್ಯಾಲದ ವಿದ್ಯಾರ್ಥಿನಿ ಕರ್ನಾಟಕ ವಿಶ್ವವಿದ್ಯಾಲಯದಿಂದ ವಿಜ್ಞಾನ ವಿಭಾಗದಲ್ಲಿ 3 ನೇ ರ‍್ಯಾಂಕ್ ಪಡೆದಿದ್ದಾರೆ. ಶೇಕಡಾ 97.08 ಪಡೆದು ಗಮನೀಯ ಸಾಧನೆಯನ್ನು ಮಾಡಿದ್ದಾರೆ. ವಿದ್ಯಾರ್ಥಿನಿ ಸಾಧನೆಗೆ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಸಮಸ್ತ ವಿದ್ಯಾರ್ಥಿಗಳು ಅಭಿನಂದಿಸಿ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.
Leave a Comment